ಅಮೆರಿಕದಲ್ಲಿ ಕರೋನ ಸೊಂಕಿಗೆ 9 ಸಾವಿರಕ್ಕೂ ಹೆಚ್ಚು ಜನ ಬಲಿ
ವಾಷಿಂಗ್ಟನ್, ಎಪ್ರಿಲ್ 6,ಮಾರಣಾಂತಿಕ ಕರೋನ ಸೋಂಕಿಗೆ ಈವರೆಗೆ ಅಮೆರಿಕದಲ್ಲಿ 9 ಸಾವಿರಕ್ಕು ಹೆಚ್ಚು ಜನರು ಮೃತಪಟ್ಟಿದ್ದಾರೆ. ಸೋಂಕು ಪ್ರಕರಣಗಳ ಸಂಖ್ಯೆಯೂ ಗಣನೀಯವಾಗಿ ಹೆಚ್ಚಳವಾಗಿದ್ದು ಸರ್ಕಾರಕ್ಕೆಬಹಳ ದೊಡ್ಡ ತಲೆನೋವಾಗಿ ಪರಿಣಿಮಿಸಿದೆ. ಇದು ಜಾಗತಿಕವಾಗಿ ಕರೋನ ಸೋಂಕಿನಿಂದ ಸಂಭವಿಸಿದ ಮೂರನೇ ಅತಿದೊಡ್ಡ ಸಾವಿನ ಪ್ರಮಾಣವಾಗಿದೆ .
ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಅಂಕಿ- ಅಂಶಗಳ ಪ್ರಕಾರ, ಪ್ರಸ್ತುತ ಸಾವಿನ ಸಂಖ್ಯೆ 9562 ಕ್ಕೆ ಏರಿಕೆಯಾಗಿದೆ. ನ್ಯೂಯಾರ್ಕ್ ನಗರದವೊಂದರಲ್ಲೆ 2, 250 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.ದೇಶದಲ್ಲಿ 331,000 ಕ್ಕೂ ಹೆಚ್ಚು ಕರೋನ ಸೋಂಕಿನ ಪ್ರಕರಣಗಳು ದೃಡಪಟ್ಟಿದೆ. ಇದು ಎಲ್ಲಾ ದೇಶಗಳೀಗಿಂತ ಅತಿ ಹೆಚ್ಚು ಪ್ರಕರಣ ದಾಖಲಾಗಿದೆ. ಈ ನಡುವೆ ಅಧ್ಯಕ್ಷ ಟ್ರಂಪ್ ಇಂದು ಶ್ವೇತಭವನದಲ್ಲಿ ಸುದ್ದಿಗಾರರ ಜೊತೆ ,ಮಾತನಾಡಿ ಮಲೇರಿಯಾ ಚಿಕಿತ್ಸೆಗಾಗಿ ಬಳಸುವ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಸಂಗ್ರಹ ಮಾಡಲಾಗಿದೆ, ಇದು ಸೋಂಕಿನ ರೋಗಿಗಳಿಗೆ ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 