ತಾಯಿಯ ಎದೆಹಾಲು ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ: ಡಾ. ಟಿ. ಲಿಂಗರಾಜು
Mother's breast milk boosts a baby's immunity: Dr. T. Lingaraju
ಲೋಕದರ್ಶನ ವರದಿ
ವಿಜಯನಗರ (ಹೊಸಪೇಟೆ): ತಾಯಿಯ ಎದೆಹಾಲು ಮಗುವಿನ ಆರೋಗ್ಯ ಮತ್ತು ಬೆಳವಣಿಗೆಗೆ ಅತ್ಯಂತ ಅಗತ್ಯವಾಗಿದ್ದು, ಇದು ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು ಹೇಳಿದರು.
ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾಯಿಯ ಹಾಲಿನಲ್ಲಿರುವ ಪೋಷಕಾಂಶಗಳು ಮಗುವಿನ ಬುದ್ಧಿಮತ್ತೆ ವೃದ್ಧಿಗೆ ಸಹಾಯ ಮಾಡುವುದರ ಜೊತೆಗೆ ಭವಿಷ್ಯದ ಹಲವು ಕಾಯಿಲೆಗಳಿಂದ ರಕ್ಷಣೆ ನೀಡುತ್ತವೆ ಎಂದರು.
ಹೆರಿಗೆಯಾದ ತಕ್ಷಣ ತಾಯಿಯ ಎದೆಯಿಂದ ಬರುವ ಮೊದಲ ಹಳದಿ ಬಣ್ಣದ ಹಾಲು (ಕೊಲೊಸ್ಟ್ರಮ್) ಮಗುವಿಗೆ ಅತ್ಯಂತ ಮುಖ್ಯವಾಗಿದ್ದು, ಇದನ್ನು ತಪ್ಪದೇ ನೀಡಬೇಕು ಎಂದು ತಿಳಿಸಿದರು. ಮಗುವಿಗೆ ಜನಿಸಿದ ಒಂದು ಗಂಟೆಯೊಳಗೆ ಎದೆಹಾಲು ನೀಡಬೇಕು.ಮೊದಲ ಆರು ತಿಂಗಳವರೆಗೆ ಎದೆಹಾಲು ಮಾತ್ರ ನೀಡಬೇಕು ಹಾಗೂ ನಂತರ ಪೂರಕ ಆಹಾರದೊಂದಿಗೆ ಎರಡು ವರ್ಷಗಳವರೆಗೆ ಸ್ತನ್ಯಪಾನ ಮುಂದುವರಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಆರಿ್ಸಎಚ್ ಅಧಿಕಾರಿ ಡಾ. ಜಂಬಯ್ಯ ಮಾತನಾಡಿ, “ಸುಸ್ಥಿರ ಜೀವನಕ್ಕಾಗಿ ಸ್ತನ್ಯಪಾನದ ಪರಿಣಾಮಕಾರಿ ವಿಧಾನಗಳನ್ನು ಉತ್ತೇಜಿಸೋಣ” ಎಂಬ ಘೋಷಣೆಯೊಂದಿಗೆ ಆಗಸ್ಟ್ 1ರಿಂದ 7ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಿಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 