ತೋರಣಗಲ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಾಯಿ-ಮಗ ನಾಪತ್ತೆ
Mother and son go missing within the limits of Toranagallu police station
ಬಳ್ಳಾರಿ ಆ.5: ತೋರಣಗಲ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 32 ವರ್ಷದ ನಾಗರತ್ನಮ್ಮ ಹಾಗೂ ಅವರ 8 ವರ್ಷದ ಪುತ್ರ ಅಭಿರಾಮ್ ರೆಡ್ಡಿ ಜುಲೈ 30ರಂದು ನಾಪತ್ತೆಯಾಗಿದ್ದಾರೆ. ಈ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರು ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ನಾಗರತ್ನಮ್ಮ ಅವರ ಚಹರೆ: ಸುಮಾರು 5.2 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದಾರೆ. ನಾಪತ್ತೆಯಾಗುವ ವೇಳೆ ಗುಲಾಬಿ ಬಣ್ಣದ ಸೀರೆ ಹಾಗೂ ನೀಲಿ ಬಣ್ಣದ ಬ್ಲೌಸ್ ಧರಿಸಿದ್ದರು. ಕನ್ನಡ, ತೆಲುಗು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.
ಅಭಿರಾಮ್ ರೆಡ್ಡಿ ಅವರ ಚಹರೆ: ಸುಮಾರು 3 ಅಡಿ ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದಾರೆ. ನಾಪತ್ತೆಯಾಗುವ ವೇಳೆ ಕೆಂಪು ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಶರ್ಟ್ ಹಾಗೂ ನೀಲಿ ಬಣ್ಣದ ಕೋಟ್ ಧರಿಸಿದ್ದರು. ಕನ್ನಡ ಭಾಷೆ ಮಾತನಾಡುತ್ತಾರೆ.
ನಾಗರತ್ನಮ್ಮ ಹಾಗೂ ಅಭಿರಾಮ್ ರೆಡ್ಡಿ ಕುರಿತು ಯಾವುದೇ ಮಾಹಿತಿ ದೊರೆತಲ್ಲಿ ತೋರಣಗಲ್ಲು ಪೊಲೀಸ್ ಠಾಣೆ (ದೂ. 08395-250100, ಮೊ. 9480803062), ಸಂಡೂರು ಸಿಪಿಐ (9480803036), ತೋರಣಗಲ್ಲು ಡಿಎಸ್ಪಿ (9480803010), ಬಳ್ಳಾರಿ ಎಸ್ಪಿ (ದೂ. 08392-258300) ಅಥವಾ ಬಳ್ಳಾರಿ ಕಂಟ್ರೋಲ್ ರೂಂ (ದೂ. 08392-279100) ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 