ಪಾಕಿಸ್ತಾನದಿಂದ ಮೋಟಾರ್ ಶೆಲ್ ದಾಳಿ : ಸೇನೆಯ ತಕ್ಕ ಪ್ರತ್ಯುತ್ತರ
ಜಮ್ಮು, ಅ 15: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಮೋಟಾರ್ ಶೆಲ್ ದಾಳಿ ಮಾಡಿ ಪಾಕಿಸ್ತಾನಿ ಪಡೆಗಳು ಮಂಗಳವಾರ ಕದನವಿರಾಮ ಉಲ್ಲಂಘಿಸಿವೆ. ಪೂಂಚ್ ಜಿಲ್ಲೆಯ ಕ್ವಾಸ್ಬಾ ಮತ್ತು ಕಿನರ್ಿ ವಲಯಗಳಲ್ಲಿ ಬೆಳಗ್ಗೆ 9.30 ರ ಸುಮಾರಿಗೆ ಈ ದಾಳಿ ನಡೆದಿದ್ದು ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಅ 11 ರಂದು ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ನಡೆದ ಅಪ್ರಚೋದಿತ ದಾಳಿಯಲ್ಲಿ ಗಾಯಗೊಂಡಿದ್ದ ಸೇನಾ ಯೋಧ ನಂತರ ಹುತಾತ್ಮರಾಗಿದ್ದಾಗಿ ಅವರು ಮಾಹಿತಿ ನೀಡಿದ್ದಾರೆ. ಅ 12 ರಂದು ಸಹ ಪಾಕಿಸ್ತಾನ ಪೂಂಚ್ ಜಿಲ್ಲೆಯ ದೇಗ್ವಾರ್ ಪ್ರದೇಶದಲ್ಲಿ ಅಪ್ರಚೋದಿತ ದಾಳಿ ನಡೆಸಿದೆ. ಅ 3 ರಂದು ಜಮ್ಮು ಕಾಶ್ಮೀರದ ಕಥುವಾ ಮತ್ತು ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿ ಬಳಿಯ ಗ್ರಾಮಗಳನ್ನು ಗುರಿಯಾಗಿಸಿ ಪಾಕಿಸ್ತಾನ ಪಡೆಗಳು ಅಪ್ರಚೋದಿತ ದಾಳಿ ನಡೆಸಿದ್ದವು. ಭಾರತೀಯ ಸೇನೆ ಮತ್ತು ಗಡಿ ಭದ್ರಾ ಪಡೆ ತಕ್ಕ ಪ್ರತ್ಯುತ್ತರ ನೀಡಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 