ಜಿಲ್ಲಾಧ್ಯಕ್ಷರಾಗಿ ಮುಡೆಣ್ಣವರ ಆಯ್ಕೆ
ಲೋಕದರ್ಶನ ವರದಿ
ಮುಂಡಗೋಡ:ಶಿರಸಿ ಶೈಕ್ಷಣಿಕ ಜಿಲ್ಲೆಯ ಮುಖ್ಯಾಧ್ಯಾಪಕರ ಸಂಘದ ಜಿಲ್ಲಾಧ್ಯಕ್ಷರಾಗಿ ಇಲ್ಲಿನ ಆದಿಜಾಂಭವ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಸ್.ಡಿ.ಮುಡೆಣ್ಣವರ ಅವರು ಆಯ್ಕೆಯಾಗಿದ್ದಾರೆ.
ನಿಕಟಪೂರ್ವ ಅಧ್ಯಕ್ಷರಾಗಿ ಎಮ್.ಎಚ್.ನಾಯ್ಕ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಎಮ್.ಜಿ.ಹೆಗಡೆ ಕಾರ್ಯನಿರ್ವಹಿಸಿದ್ದರು. ಮಾ.22ರಂದು ಶಿರಸಿಯ ಲಯನ್ಸ್ ಪ್ರೌಢಶಾಲೆಯಲ್ಲಿ ಜರುಗಿದ ಶೈಕ್ಷಣಿಕ ಜಿಲ್ಲೆಯ 6 ತಾಲೂಕುಗಳ ಮುಖ್ಯ ಶಿಕ್ಷಕರ ಸಭೆಯಲ್ಲಿ ಎಸ್.ಡಿ. ಮುಡೆಣ್ಣವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮುಂಡಗೋಡ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಹಳಿಯಾಳ, ದಾಂಡೇಲಿ, ಜೊಯಿಡಾ ತಾಲೂಕುಗಳ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಸಹಕಾರಕ್ಕಾಗಿ ಹೊಸದಾಗಿ ಆಯ್ಕೆಯಾದ ಪದಾಧಿಕಾರಿಗಳ ವತಿಯಿಂದ ಜಿಲ್ಲಾಧ್ಯಕ್ಷರಾದ ಎಸ್.ಡಿ.ಮುಡೆಣ್ಣವರ ಅವರು ವಂದನೆಗಳನ್ನು ಕೋರಿದ್ದಾರೆ. ಜಿಲ್ಲೆಯ ಎಲ್ಲಾ ಮುಖ್ಯ ಶಿಕ್ಷಕರಿಗೆ ಯಾವುದೇ ರೀತಿಯ ತೊಂದರೆ ಬರದಂತೆ ನೋಡಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.