ಮುಂಬೈ; ರಾಷ್ಟ್ರೀಯ ತನಿಖಾ ಸಂಸ್ಥೆ ಸಿಬ್ಬಂದಿಯೊಬ್ಬರಿಗೆ ಕೊರೊನಾ ವೈರಸ್
ಮುಂಬೈ, ಏ ೨೫, ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿ ಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.
ಮಹಾರಾಷ್ಟ್ರದ ಮುಂಬೈನಲ್ಲಿರುವ ಎನ್ ಐ ಎ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎ ಎಸ್ ಐ ಗೆ ಕೋವಿಡ್ -೧೯ ಪಾಸಿಟಿವ್ ಎಂದು ಪರೀಕ್ಷೆಯಲ್ಲಿ ದೃಢಪಟ್ಟನಂತರ ಆ ಸಂಸ್ಥೆಯ ಅಧಿಕಾರಿಗಳು ಜಾಗೃತಗೊಂಡಿದ್ದು, ಎನ್ ಐ ಎ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲ ಉದ್ಯೋಗಿಗಳನ್ನು ಸ್ವಯಂ ಕ್ವಾರೆಂಟೈನ್ ಒಳಪಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಶುಕ್ರವಾರ ಒಂದೇ ದಿನ ೩೯೪ ಸೋಕು ಪ್ರಕರಣಗಳು ಪತ್ತೆಯಾಗಿದ್ದು. ೧೧ ಮಂದಿ ಮೃತಪಟ್ಟಿದ್ದಾರೆ. ಇದರೊಂದಾಗಿ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ೬,೮೧೭ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವ ಕಾರಣ, ಸಂಸ್ಥೆಯ ಕಾರ್ಯ ಕಲಾಪಗಳನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿದೆ.