ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿ: ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿ: ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ
ಮುಂಡಗೋಡ 11: ತಾಲೂಕ ಒಕ್ಕುಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಸಂಸ್ಥೆಯ ನೂತನ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬಣ್ಣ ಲಾಡನವರ ಅವರು ಶನಿವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮುಂಡಗೋಡ ತಾಲೂಕಿನ ಪ್ರತಿಷ್ಠಿತ ಮಾರ್ಕೆಟ್ ಸೊಸೈಟಿಯ ಎರಡನೇಯ ಬಾರಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಆಯ್ಕೆಯಾಗಿದ್ದಾರೆ. ತಾಲೂಕ ಒಕ್ಕುಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ (ಮಾರ್ಕೆಟ್ ಸೊಸೈಟಿಯ) ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಮಾಜಿ ಶಾಸಕರಾಸ ವಿ.ಎಸ್.ಪಾಟೀಲ್, ಕೆ.ಪಿ.ಸಿ.ಸಿ ಸದಸ್ಯರಾದ ವಿವೇಕ್ ಹೆಬ್ಬಾರ್ ಅವರು ಶಾಲು ಹೊದಿಸಿ ಸನ್ಮಾನಿಸಿ ಶುಭ ಹಾರೈಸಿದರು.
ಈ ವೇಳೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೃಷ್ಣ ಹಿರೇಹಳ್ಳಿ, ಹಿರಿಯ ಸಹಕಾರಿಗಳಾದ ಎಚ್.ಎಮ್.ನಾಯ್ಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಞಾನೇಶ್ವರ ಗುಡಿಯಾಳ, ನಿರ್ದೇಶಕರಾದ ಸಿದ್ಧಪ್ಪ ಹಡಪದ, ಪರಶುರಾಮ ತಹಶಿಲ್ದಾರ್, ಪ್ರಮುಖರಾದ ದೇವು ಪಾಟೀಲ್, ಕೆ.ಸಿ.ಗಲಬಿ, ಎನ್.ಎಮ್.ದುಂಡಸಿ, ರಾಮಕೃಷ್ಣ ಮೂಲಿಮನಿ, ನಾಗಭೂಷಣ್ ಹಾವಣಗಿ, ಧರ್ಮರಾಜ ನಾಡಗೇರ್ ಸೇರಿದಂತೆ ಹಿರಿಯರು, ಸಂಸ್ಥೆಯ ನಿರ್ದೇಶಕರು, ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು ಕಾರ್ಯಕರ್ತರು ಹಾಗೂ ಉಪಸ್ಥಿತರಿದ್ದರು.