ನಾಯಕರಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ಗೆ ಮುಂಡ್ರಿಗಿ ನಾಗರಾಜ್ ಮನವಿ
Mundrigi Nagaraj appeals to high command to give ministerial posts to leaders
ನಾಯಕರಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ಗೆ ಮುಂಡ್ರಿಗಿ ನಾಗರಾಜ್ ಮನವಿ
ಬಳ್ಳಾರಿ 02: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ರಚನೆಗೆ ಸಿದ್ಧತೆಗಳು ನಡೆಯುತ್ತಿದ್ದು, ಅನುಭವಿ ಹಾಗೂ ಜನಪರ ನಾಯಕರಿಗೆ ಸಚಿವ ಸ್ಥಾನ ನೀಡುವಂತೆ ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್ ಕಾಂಗ್ರೆಸ್ ಹೈಕಮಾಂಡ್ ಮತ್ತು ನೂತನ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಾಜಿ ಸಚಿವರು ಹಾಗೂ ಹಿರಿಯ ಕಾಂಗ್ರೆಸ್ ನಾಯಕರಾದ ಕೆ.ಎಚ್. ಮುನಿಯಪ್ಪ, ಸಂತೋಷ್ ಎಸ್. ಲಾಡ್ ಮತ್ತು ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಸೇರೆ್ಡಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.ಕೆ.ಎಚ್. ಮುನಿಯಪ್ಪ ಅವರು ದೀರ್ಘಕಾಲದ ರಾಜಕೀಯ ಅನುಭವ ಹೊಂದಿರುವ ನಾಯಕರು. ದಲಿತ ಸಮುದಾಯದ ಪ್ರಭಾವಿ ಧ್ವನಿಯಾಗಿ ಗುರುತಿಸಿಕೊಂಡಿರುವ ಅವರು, ಕರ್ನಾಟಕ ಮಾದರ ಮಹಾಸಭಾದ ರಾಜ್ಯಾಧ್ಯಕ್ಷರಾಗಿಯೂ ಸಮಾಜದ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆ ಅಪಾರವಾಗಿದ್ದು, ಅವರ ಅನುಭವವನ್ನು ಸರ್ಕಾರ ಬಳಸಿಕೊಳ್ಳುವುದು ಅಗತ್ಯವಾಗಿದೆ ಎಂದು ಮುಂಡ್ರಿಗಿ ನಾಗರಾಜ್ ಅಭಿಪ್ರಾಯಪಟ್ಟಿದ್ದಾರೆ.ಹಾಗೆಯೇ, ಮಾಜಿ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ತಮ್ಮ ಸಚಿವಾವಧಿಯಲ್ಲಿ ಕಾರ್ಮಿಕರ ಕಲ್ಯಾಣಕ್ಕಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿ ಉತ್ತಮ ಆಡಳಿತಗಾರರಾಗಿ ಗುರುತಿಸಿಕೊಂಡಿದ್ದಾರೆ. ಕಾರ್ಮಿಕರು ಹಾಗೂ ದುಡಿಯುವ ವರ್ಗದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದು, ಅವರ ಅನುಭವ ಮತ್ತು ಆಡಳಿತ ಸಾಮರ್ಥ್ಯ ರಾಜ್ಯ ಸರ್ಕಾರಕ್ಕೆ ಉಪಯುಕ್ತವಾಗಲಿದೆ ಎಂದು ತಿಳಿಸಿದ್ದಾರೆ.ಇದೇ ವೇಳೆ, ಬಳ್ಳಾರಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವರಾದ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಜಿಲ್ಲೆಗೆ ಸಮರ್ಕ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಜನರ ಸಮಸ್ಯೆಗಳು, ಅಭಿವೃದ್ಧಿ ಅಗತ್ಯತೆಗಳು ಹಾಗೂ ಪ್ರಾದೇಶಿಕ ಬೇಡಿಕೆಗಳ ಬಗ್ಗೆ ನಾಗೇಂದ್ರ ಅವರಿಗೆ ಉತ್ತಮ ಅರಿವು ಇದ್ದು, ಸಚಿವ ಸಂಪುಟದಲ್ಲಿ ಅವರ ಸೇರೆ್ಡ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಎಲ್ಲ ವರ್ಗಗಳ ಪ್ರತಿನಿಧಿತ್ವವನ್ನು ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ರಚನೆ ಮಾಡಬೇಕಿದ್ದು, ಅನುಭವಿ ಹಾಗೂ ಜನಪರ ನಾಯಕರಿಗೆ ಅವಕಾಶ ನೀಡುವುದು ಸರ್ಕಾರದ ಕಾರ್ಯಕ್ಷಮತೆಯನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಮುಂಡ್ರಿಗಿ ನಾಗರಾಜ್ ತಿಳಿಸಿದ್ದಾರೆ.ಕೆ.ಎಚ್. ಮುನಿಯಪ್ಪ, ಸಂತೋಷ್ ಎಸ್. ಲಾಡ್ ಮತ್ತು ಬಿ. ನಾಗೇಂದ್ರ ಅವರು ಪಕ್ಷ ಸಂಘಟನೆ ಹಾಗೂ ಸಾರ್ವಜನಿಕ ಸೇವೆಯಲ್ಲಿ ಸಲ್ಲಿಸಿರುವ ಕೊಡುಗೆಗಳನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವರು ಮನವಿ ಮಾಡಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 