ಗಣೇಶ ನಗರದಲ್ಲಿ ಸ್ವಚ್ಛತಾ ಕಾರ್ಯ ಪರಿಶೀಲಿಸಿದ ಪುರಸಭೆ ಮುಖ್ಯಾಧಿಕಾರಿ: ನಾಮದೇವ ಲಮಾಣಿ.
Municipal Chief Officer: Namdev Lamani inspected the cleanliness work in Ganesh Nagar.
ಲೋಕದರ್ಶನ ವರದಿ
ಮಹಾಲಿಂಗಪುರ, ಜೂ. ೨೨: ಮಹಾಲಿಂಗಪುರ ನಗರದ ಗಣೇಶ ನಗರ ಪ್ರದೇಶದಲ್ಲಿ ನಡೆಯುತ್ತಿರುವ ಸ್ವಚ್ಛತಾ ಕಾರ್ಯ ಹಾಗೂ ಚರಂಡಿ ಸ್ವಚ್ಛತಾ ಕಾಮಗಾರಿಗಳನ್ನು ಪುರಸಭೆಯ ಮುಖ್ಯಾಧಿಕಾರಿ ನಾಮದೇವ ಲಮಾಣಿ ಅವರು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು.
ಗಣೇಶ ನಗರದ ೧೫ನೇ ವಾರ್ಡ್ನಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕೈಗೊಂಡಿರುವ ಸ್ವಚ್ಛತಾ ಕಾರ್ಯಗಳ ಪ್ರಗತಿಯನ್ನು ವೀಕ್ಷಿಸಿದ ಅವರು, ಕಾಮಗಾರಿಯ ಗುಣಮಟ್ಟ ಮತ್ತು ಕಾರ್ಯದ ವೇಗದ ಬಗ್ಗೆ ಮಾಹಿತಿ ಪಡೆದು ಸಿಬ್ಬಂದಿಗೆ ಅಗತ್ಯ ಮಾರ್ಗದರ್ಶನ ನೀಡಿದರು. ಅಲ್ಲದೆ ಸ್ವಚ್ಛತಾ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸುವಂತೆ ಸೂಚಿಸಿದರು.
ಕಚೇರಿಗೆ ಸಿಮೀತವಾಗದೆ ಕಾರ್ಯ ಸ್ಥಳಕ್ಕೆ ತೆರಳಿ ಕಾರ್ಮಿಕರೊಂದಿಗೆ ಚರ್ಚಿಸಿ ಕೆಲಸದ ಮೇಲ್ವಿಚಾರಣೆ ನಡೆಸಿದ ಮುಖ್ಯಾಧಿಕಾರಿಯ ಕಾರ್ಯವೈಖರಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ನಗರದಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ತೋರಿಸುತ್ತಿರುವ ಬದ್ಧತೆ ಶ್ಲಾಘನೀಯವಾಗಿದೆ ಎಂದು ಸ್ಥಳೀಯ ನಿವಾಸಿಗಳು ಅಭಿಪ್ರಾಯಪಟ್ಟಿದ್ದಾರೆ.
ಗಣೇಶ ನಗರ ಸೇರಿದಂತೆ ನಗರದ ವಿವಿಧ ವಾರ್ಡ್ಗಳಲ್ಲಿ ಸ್ವಚ್ಛತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಪುರಸಭೆ ಆದ್ಯತೆ ನೀಡುತ್ತಿದ್ದು, ಸಾರ್ವಜನಿಕರ ಸಹಕಾರದೊಂದಿಗೆ ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ. ಇದೇ ಸಂದರ್ಭದಲ್ಲಿ ಪೌರಕಾರ್ಮಿಕರಾದ ಲಕ್ಕನ ದೊಡಮನಿ , ಸುರೇಶ ಉತ್ತೂರ, ಆನಂದ ನಡುವಿನಮನಿ, ಆನಂದ ಮಾದರ, ಸುನೀಲ ಉತ್ತೂರ, ಸಮುದಾಯ ಸಂಚಾಲಕರಾದ ಕವಿತಾ ಜಿಡ್ಡಿಮಣಿ, ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 