ಬೀದಿ ನಾಯಿಗಳು, ಹಂದಿಗಳ ನಿಯಂತ್ರಣಕ್ಕೆ ಪುರಸಭೆ ಕ್ರಮ

ಬೀದಿ ನಾಯಿಗಳು, ಹಂದಿಗಳ ನಿಯಂತ್ರಣಕ್ಕೆ ಪುರಸಭೆ ಕ್ರಮ  Municipal measures to control stray dogs and pigs

ಲಕ್ಷ್ಮೇಶ್ವರ  20: ಪಟ್ಟಣದಲ್ಲಿ ಬೀದಿ ನಾಯಿಗಳು ಹಾಗೂ ಹಂದಿಗಳ ಹಾವಳಿ ಹೆಚ್ಚಾಗಿ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದ ಹಿನ್ನೆಲೆಯಲ್ಲಿ, ಪುರಸಭೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.  ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ ಹಾಗೂ ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಮಂಜುನಾಥ್ ಮುದುಗಲ್ ಅವರ ನೇತೃತ್ವದಲ್ಲಿ ಪೌರಕಾರ್ಮಿಕರ ತಂಡ ಬೀದಿ ನಾಯಿಗಳನ್ನು ಹಿಡಿದು ಬೇರೆಡೆಗೆ ಸ್ಥಳಾಂತರಿಸುವ ಕಾರ್ಯಾಚರಣೆ ನಡೆಸುತ್ತಿದೆ. ಮಂಗಳವಾರದಿಂದ ಆರಂಭವಾದ ಕಾರ್ಯಾಚರಣೆ ಬುಧವಾರವೂ ಮುಂದುವರಿಯಿತು.  

ಇದೇ ವೇಳೆ, ಮಕ್ಕಳು ಬಯಲು ಪ್ರದೇಶಗಳಿಗೆ ತೆರಳುವಾಗ ಹಂದಿಗಳು ದಾಳಿ ನಡೆಸಿ ಗಾಯಗೊಳಿಸಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಹಂದಿಗಳನ್ನೂ ಹಿಡಿದು ಸ್ಥಳಾಂತರಿಸುವ ಕಾರ್ಯ ಕೈಗೊಳ್ಳಲಾಗಿದೆ.  ಪಟ್ಟಣದಲ್ಲಿ ಬೀದಿ ನಾಯಿಗಳು ಹಾಗೂ ಹಂದಿಗಳ ಹಾವಳಿ ನಿಯಂತ್ರಣಕ್ಕೆ ಪುರಸಭೆ ಭರ್ಜರಿ ಕಾರ್ಯಾಚರಣೆ ಕೈಗೊಂಡಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಮುಂದೆಯೂ ಇಂತಹ ಸಮಸ್ಯೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.