ಹೂವಿನ ಹಡಗಲಿ

ಬೀದಿನಾಯಿಗಳ ನಿಯಂತ್ರಣಕ್ಕೆ ಪುರಸಭೆ ಸೂಚನೆ

ಬೀದಿನಾಯಿಗಳ ನಿಯಂತ್ರಣಕ್ಕೆ ಪುರಸಭೆ ಸೂಚನೆ

 ಹೂವಿನಹಡಗಲಿ 19 :  ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ವಹಿಸುವಂತೆ ಪುರಸಭೆ ಮುಖ್ಯಾಧಿಕಾರಿ ಇಮಾಮ್ ಸಾಹೇಬ್  ತಿಳಿಸಿದ್ದಾರೆ.ಪುರಸಭೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು,  ಮುಖ್ಯಸ್ಥರಿಗೆ ಈ ಮೂಲಕ ತಿಳಿಸುವುದೇನೆಂದರೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ 5/2025 ರಲ್ಲಿ ನೀಡಿರುವ ನಿರ್ದೇಶನದಂತೆ ತಮ್ಮ ಸಂಸ್ಥೆಯ ಅವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರೀಶೀಲಿಸಿ ಕೂಡಲೇ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಪುರಸಭೆ ಕಾರ್ಯಾಲಯಕ್ಕೆ ಪತ್ರದ ಮೂಲಕ ತಿಳಿಸಬೇಕು.ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸಬೇಕು.  ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂದಿಸುವದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಬೇಕು. ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನ: ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವುಗಳನ್ನು ಸ್ಥಳಾಂತರಿಸುವ ವೆಚ್ಚವನ್ನು ತಮ್ಮ ಸಂಸ್ಥೆಯಿಂದ ವಸೂಲಿ ಮಾಡಲಾಗುವುದು.ಸರ್ವೋಚ್ಚ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ತಮ್ಮ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಪುರಸಭೆ  ಕಾರ್ಯಾಲಯ ಪ್ರಕಟಣೆ ತಿಳಿಸಿದೆ. 


ಸುದ್ದಿ ಓದಿ