ಕುತ್ತಿಗೆಗೆ ಪ್ಲಾಸ್ಟಿಕ್ ಹಗ್ಗ ಬಿಗಿದು ಯುವಕನ ಕೊಲೆ
ಬೈಲಹೊಂಗಲ 24: ಯುವಕನೋರ್ವನಿಗೆ ಕುತ್ತಿಗೆಗೆ ಪ್ಲಾಸ್ಟಿಕ್ ಹಗ್ಗ ಬಿಗಿದು ಕೊಲೆ ಮಾಡಿ ಪರಾರಿಯಾದ ಘಟನೆ ಮಂಗಳವಾರ ತಡರಾತ್ರಿ ಜರುಗಿದೆ.
ಕೊಲೆಯಾದ ಯುವಕನನ್ನು ಕೆ.ಸಿ.ನಗರ 4 ನೇ ರಸ್ತೆಯ ನಿವಾಸಿ ಶಶಿಕಾಂತ ಸುರೇಶ ಮಿರಜಕರ(34) ಎಂದು ಗುರುತಿಸಲಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪ್ರಕರಣ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಡಿವಾಯ್ಎಸ್ಪಿ ಶಿವಾನಂದ ಕಟಗಿ, ಸಿಪಿಐ ಯು.ಎಚ್.ಸಾತೇನಹಳ್ಳಿ ಮಾರ್ಗದರ್ಶನದಲ್ಲಿ ಪಿಎಸೈ ಈರಪ್ಪ ರಿತ್ತಿ ತನಿಖೆ ಕೈಗೊಂಡು ಆರೋಪಿಗಳನ್ನು ಪತ್ತೆ ಹಚ್ಚಲು ಜಾಲ ಬೀಸಿದ್ದಾರೆ.