ಮುತ್ತಪ್ಪ ರೈ ಮತ್ತೆ ಆಸ್ಪತ್ರೆಗೆ ದಾಖಲು: ಆರೋಗ್ಯ ಗಂಭೀರ
ಬೆಂಗಳೂರು, ಏ. 30,ಕ್ಯಾನ್ಸರ್ನಿಂದ ಬಳಲುತ್ತಿರುವ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಅವರು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.ಎರಡು ವರ್ಷದಿಂದ ಕ್ಯಾನ್ಸರ್ನಿಂದ ಬಳಲುತ್ತಿರುವ ಅವರ ಆರೋಗ್ಯ ಸ್ಥಿತಿ ಇತ್ತೀಚೆಗೆ ವಿಷಮಗೊಂಡಿದ್ದು ಸಾವು ನೋವಿನ ಮಧ್ಯೆ ಹೋರಾಡುತ್ತಿರುವ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.ಭೂಗತ ಲೋಕವನ್ನು ತೊರೆದು ಹಲವು ವರ್ಷಗಳಿಂದ ಜಯ ಕರ್ನಾಟಕ ಸಂಘಟನೆ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. 2013ರಲ್ಲಿ ಇವರ ಪತ್ನಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. 2018ರಲ್ಲಿ ಇವರಿಗೆ ಕ್ಯಾನ್ಸರ್ ಇರುವುದು ದೃಢಪಟ್ಟಿತ್ತು. ಇತ್ತೀಚೆಗೆ ಸುದ್ದಿಗೋಷ್ಠಿ ಕರೆದು ಸ್ವತಃ ಅವರೇ ಕ್ಯಾನ್ಸರ್ ಬಗ್ಗೆ ಹೇಳಿಕೊಂಡಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 