ಅನಾರೋಗ್ಯ ಹಿನ್ನೆಲೆ: ಅಥ್ಲೆಟಿಕ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಮುತ್ತಪ್ಪ ರೈ
ಬೆಂಗಳೂರು, ಜ.20 : ಕ್ಯಾನ್ಸರ್ ರೋಗದಿಂದ ಬಳಲುತ್ತಿರುವುದರಿಂದ ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಿಸಿದ್ದೇನೆ ಎಂದು ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ತಿಳಿಸಿದ್ದಾರೆ.
ತಮ್ಮ ಅನಾರೋಗ್ಯದ ಕುರಿತು ಎದ್ದಿರುವ ಅನುಮಾನಗಳ ಬಗ್ಗೆ ಸೋಮವಾರ ಬಿಡದಿ ಬಳಿಯ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಅವರು, ಒಂದು ವರ್ಷದ ಹಿಂದೆ ಕುಕ್ಕೆಗೆ ಹೋಗುವ ಸಂದರ್ಭದಲ್ಲಿ ಬೆನ್ನು ನೋವು ಕಾಣಿಸಿಕೊಂಡಿತು. ನಂತರದಲ್ಲಿ ಪರೀಕ್ಷೆ ಮಾಡಿದಾಗ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ನಂತರ ದೆಹಲಿಯ ಮ್ಯಾಕ್ಸ್, ಚೆನ್ಮೈನ ಅಪೋಲೊ , ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ.ಶೇ.90ರಷ್ಟು ಗುಣ ಆಗಿರುವುದಾಗಿ ವೈದ್ಯರು ಹೇಳಿದರು. ಆದರೆ ನಂತರದಲ್ಲಿ ಮಿದುಳಿಗೆ ಕ್ಯಾನ್ಸರ್ ತಗುಲಿತ್ತು. ಕೆಲವು ತಿಂಗಳಷ್ಟೇ ಬದುಕುವುದಾಗಿ ವೈದ್ಯರು ಹೇಳಿದರು. ಹೀಗಾಗಿ ಬಿಡದಿಗೆ ವಾಪಸ್ ಆಗಿದ್ದೇನೆ. ನನಗೀಗ 68 ವರ್ಷ. ಐದು ಗುಂಡು ಬಿದ್ದರೂ ಬದುಕಿದವನು. ಸಾವಿಗೆ ಹೆದರುವುದಿಲ್ಲ. ವಿಲ್ ಪವರ್‌ನಿಂದ ಬದುಕುತ್ತಿದ್ದೇನೆ. ಸಮಾಜ ಸೇವೆ ಮುಂದುವರಿಸುತ್ತೇನೆ’ ಎಂದು ತಿಳಿಸಿದರು
‘ವರ್ಷಕ್ಕೆ 20ರಿಂದ 30 ಕೋಟಿ ರೂ. ತೆರಿಗೆ ಕಟ್ಟುತ್ತಿದ್ದೇನೆ. ಆಸ್ತಿ ಕುರಿತು ಈಗಾಗಲೇ ವಿಲ್ ಮಾಡಿಸಿದ್ದು, ಮಕ್ಕಳಿಗೂ ತಿಳಿಸಿದ್ದೇನೆ. ಕಳೆದ 15-20 ವರ್ಷಗಳಿಂದ ನನ್ನ ಜೊತೆಗಿರುವವರಿಗೆ ಒಂದೊಂದು ನಿವೇಶನ ಕೊಡುವಂತೆ ತಿಳಿಸಿದ್ದೇನೆ ಎಂದು ವಿವರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 