ಮುಂದಗೋಡ

ಸುಂದರ ಪಟ್ಟಣವನ್ನಾಗಿ ನಿರ್ಮಾಣ ಮಾಡುವ ಕನಸು ನನ್ನದು: ಹೆಬ್ಬಾರ

ಸುಂದರ ಪಟ್ಟಣವನ್ನಾಗಿ ನಿರ್ಮಾಣ ಮಾಡುವ ಕನಸು ನನ್ನದು: ಹೆಬ್ಬಾರ

ಮುಂಡಗೋಡ 24:  ಮುಂಡಗೋಡ ಪಟ್ಟಣವನ್ನು ಸುಂದರ ಪಟ್ಟಣವನ್ನಾಗಿ ನಿರ್ಮಾಣ ಮಾಡುವ ಕನಸು ನನ್ನದಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.  

ಪಟ್ಟಣದ ಎಪಿಎಮ್‌ಸಿ ಆವರಣದಲ್ಲಿ ಗೃಹ ಇಲಾಖೆಯ ಅಂದಾಜು 2.20 ಕೋಟಿ ರೂ. ಅನುದಾನದ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಅಗ್ನಿಶಾಮಕ ಠಾಣೆಯ ಕಟ್ಟಡದ ಅಡಿಗಲ್ಲು ಸಮಾರಂಭ ಮತ್ತು ಪಟ್ಟಣದ ಪ್ರಮುಖ ರಸ್ತೆಗಳಿಗೆ ಅಲಂಕೃತ ದೀಪ ಅಳವಡಿಕೆ ಕಾಮಗಾರಿಗೆ ಶಿವಾಜಿ ಸರ್ಕಲ್‌ನಲ್ಲಿ ಶನಿವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಪಟ್ಟಣದ ಹೈಟೆಕ್ ಬಸ್ ನಿಲ್ದಾಣದ ನಿರ್ಮಾಣದ ಸಮಯದಲ್ಲಿ ಅನಿವಾರ್ಯವಾಗಿ ಅಗ್ನಿಶಾಮಕ ಠಾಣೆಯನ್ನು ಸ್ಥಳಾಂತರಿಸಲಾಗಿತ್ತು. ಸಕಲ ಸೌಕರ್ಯಗಳಿಂದ ಕೂಡಿದ ನೂತನ ಕಟ್ಟಡ ನಿರ್ಮಾಣ ಮಾಡಲಾಗುವುದು. ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ಮಾರಿಕಾಂಬಾ ದೇವಸ್ಥಾನದವರೆಗೆ ಮತ್ತು ಹೀರೋ ಹೋಂಡಾ ಶೋರೂಮ್‌ನಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜ್‌ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಕಮಾನಿನ ಆಕಾರದ ದೀಪಗಳನ್ನು ಅಳವಡಿಸಲಾಗುವುದು ಎಂದರು.     

ಈ ಸಂದರ್ಭದಲ್ಲಿ ಪ.ಪಂ.ಅಧ್ಯಕ್ಷೆ ಜಯಸುಧಾ ಭೋವಿವಡ್ಡರ, ಉಪಾಧ್ಯಕ್ಷ ಶ್ರೀಕಾಂತ ಸಾನು, ಸ್ಥಾಯಿ ಸಮಿತಿ ಅಧ್ಯಕ್ಷೆ ಶಕುಂತಲಾ ನಾಯಕ, ಜಿ.ಪಂ.ಮಾಜಿ ಸದಸ್ಯ ರವಿಗೌಡ ಪಾಟೀಲ, ಉಮೇಶ ಬಿಜಾಪುರ, ಗುಡ್ಡಪ್ಪ ಕಾತೂರ, ದೇವು ಪಾಟೀಲ, ರಾಜು ಗುಬ್ಬಕ್ಕನವರ, ಪರಶುರಾಮ ತಹಶೀಲ್ದಾರ, ನಾಗಭೂಷಣ ಹಾವಣಗಿ, ನಾಗಪ್ಪ ವಡ್ಡರ(ಹೊಂಡಾ), ಪ.ಪಂ. ಮುಖ್ಯಾಧಿಕಾರಿ ಮಲ್ಲಯ್ಯ ಹಿರೇಮಠ, ಸಿಬ್ಬಂದಿ, ಸದಸ್ಯರು ಹಾಗೂ ಮುಂತಾದವರು ಉಪಸ್ಥಿತರಿದ್ದರು. 


ಸುದ್ದಿ ಓದಿ