ಮೈಸೂರು ದಸರಾ: ಸ್ಥಳೀಯ ಕಲಾವಿದರನ್ನು ಕಡೆಗಣಿಸಿದ ಆರೋಪ
Mysuru Dasara: Allegations of sidelining local artists
ಮಹಾಲಿಂಗಪುರ, ಸೆ.27: ಮೈಸೂರು ದಸರಾ ಮಹೋತ್ಸವದಲ್ಲಿ ಬಾಗಲಕೋಟೆ ಜಿಲ್ಲೆಯ ಕಲೆ, ಸಂಸ್ಕೃತಿ ಹಾಗೂ ಜಾನಪದ ಪರಂಪರೆಯನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರಗಳ ತಯಾರಿಕೆಯಲ್ಲಿ ದಶಕದಿಂದ ಸೇವೆ ಸಲ್ಲಿಸುತ್ತಿರುವ ಸ್ಥಳೀಯ ಕಲಾವಿದರನ್ನು ಈ ಬಾರಿ ಕಡೆಗಣಿಸಿ, ಅನ್ಯ ಜಿಲ್ಲೆಯ ಕಲಾವಿದರಿಗೆ ಅವಕಾಶ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ಕುರಿತು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಹಾಗೂ ಕಲಾವಿದ ಡಿ.ಕೆ. ರಂಗನಾಥ ಅವರು ಮೈಸೂರು ದಸರಾ ನೋಡಲ್ ಅಧಿಕಾರಿ ಹಾಗೂ ಗ್ರಾಮೀಣ ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ಸಿದ್ದರಾಜ ಬಳ್ಳೂರಗಿ ವಿರುದ್ಧ ಆರೋಪ ಮಾಡಿದ್ದಾರೆ.
ಭಾನುವಾರ ಮಹಾಲಿಂಗಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಂಗನಾಥ, ಕಳೆದ ಹತ್ತು ವರ್ಷಗಳಿಂದ ದಸರಾ ಉತ್ಸವದ ಸ್ತಬ್ಧಚಿತ್ರಗಳ ತಯಾರಿಕೆಯಲ್ಲಿ ಹೆಚ್ಚಿನ ಅನುದಾನಕ್ಕೆ ಒತ್ತಾಯಿಸದೆ, ಇಲಾಖೆ ನೀಡಿದ ಅಲ್ಪ ಮೊತ್ತದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದೇವೆ.
ತುರ್ತು ಸಂದರ್ಭಗಳಲ್ಲಿಯೂ ಸಮಯದ ಮಿತಿಯನ್ನು ಲೆಕ್ಕಿಸದೆ ಜಿಲ್ಲೆಯ ಕಲೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಿದ್ದೇವೆ. ಆದರೆ ಈ ಬಾರಿ ಸ್ಥಳೀಯರನ್ನು ಕಡೆಗಣಿಸಿ ಅನ್ಯ ಜಿಲ್ಲೆಯ ಕಲಾವಿದರಿಗೆ ಅವಕಾಶ ನೀಡಲಾಗಿದೆ ಎಂದು ದೂರಿದರು.
ಕಳೆದ ವರ್ಷ ಕಮಿಷನ್ ಹಣದ ವಿಚಾರದಲ್ಲಿ ತಮ್ಮ ಬಳಿ ಹಣ ಕೇಳಲಾಗಿತ್ತು. ಅದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಈ ಬಾರಿ ಅವಕಾಶ ನೀಡಲಾಗಿಲ್ಲ ಎಂಬ ಅನುಮಾನವಿದೆ ಎಂದು ರಂಗನಾಥ ಆರೋಪಿಸಿದರು. ಆದರೆ ಈ ಆರೋಪಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಯಾವುದೇ ಅಧಿಕೃತ ಸ್ಪಷ್ಟನೆ ಇದುವರೆಗೆ ಲಭ್ಯವಾಗಿಲ್ಲ.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 