ನೀಟ್‌: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್‌ ಪ್ರತಿಭಟನೆ

ನೀಟ್‌: ವಿದ್ಯಾರ್ಥಿಗಳ ಹೋರಾಟಕ್ಕೆ  ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್‌ ಪ್ರತಿಭಟನೆ NEET: Candlelight protest to support students' struggle and pray for peace for the souls of the dece

ಬೆಳಗಾವಿ : ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಕ್ಯಾಂಡಲ್‌ ಹಿಡಿದು ಪ್ರತಿಭಟನೆ ನಡೆಸಿದರು. ಅಲ್ಲದೆ ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿದರು. 

     ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಹಾಗೂ ಪ್ರಧಾನಮಂತ್ರಿಯವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಇತ್ತೀಚಿನ ಬೆಳವಣಿಗೆಗಳನ್ನು ಖಂಡಿಸಿ, ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡುವಂತೆ ಒತ್ತಾಯಿಸಿದರು.

    ಪ್ರಾಣ ಕಳೆದುಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಹೊಣೆ ಹೊತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

  ಪ್ರತಿಭಟನೆಯ ವೇಳೆ ಕೆಲಕಾಲ ಚೆನ್ನಮ್ಮ ವೃತ್ತದಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿ, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.