ಮೇ 3 ರಂದು ನೀಟ್ ಪರೀಕ್ಷೆ : ಪರೀಕ್ಷಾ ಕೇಂದ್ರಗಳಿಗೆ ಡಿಸಿ ಭೇಟಿ ಪರೀಶೀಲನೆ
NEET exam on May 3: DC visits exam centers for inspection
ಲೋಕದರ್ಶನ ವರದಿ
ಬಾಗಲಕೋಟೆ 01: ಬಾಗಲಕೋಟೆ ನಗರದಲ್ಲಿ ಮೇ 3 ರಂದು ನಡೆಯಲಿರುವ ರಾಷಿೊಥಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಸಂಗಪ್ಪ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಗುರುವಾರ ಭೇಟಿ ನೀಡಿ ಸಿದ್ದತಾ ಕಾರ್ಯವನ್ನು ಪರೀಶೀಲಿಸಿದರು. ನಗರದ ಬಸವೇಶ್ವರ ಪಿಯು ಕಾಲೇಜ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಭೇಟಿ ನೀಡಿ ಸಿದ್ದತಾ ಕಾರ್ಯಗಳನ್ನು ಪರೀಶೀಲಿಸಿ ಮಾತನಾಡಿದ ಅವರು ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಪೂರೈಕೆ, ಸಿಸಿಟಿವಿ ನಿಗಾ ವ್ಯವಸ್ಥೆ ಹಾಗೂ ಭದ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ರೀತಿಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಭೇಟಿ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಹಾಗೂ ಇತರರು ಇದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 