ಎನ್ ಇಟಿ, ನೀಟ್ ನಿಂದ ಎನ್ಇಟಿ, ನೀಟ್, ಜೆಇಇ ಪರೀಕ್ಷೆ
ನವದೆಹಲಿ 07: ವಿವಿಧ ಪ್ರವೇಶ ಪರೀಕ್ಷೆಗಳಿಗಾಗಿಯೇ ರಚಿಸಲಾಗಿರುವ ನೂತನ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ-ಎನ್ಟಿಎ) ಎನ್ ಇಟಿ, ನೀಟ್ ಹಾಗೂ ಜೆಇಇ ಮುಖ್ಯ ಪರೀಕ್ಷೆಗಳನ್ನು ನಡೆಸಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರು ಶನಿವಾರ ಹೇಳಿದ್ದಾರೆ.
ಇದುವರೆಗ ಎನ್ ಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗಳನ್ನು ಸಿಬಿಎಸ್ಇ ನಡೆಸುತ್ತಿತ್ತು. ಇನ್ನು ಮುಂದೆ ಪರೀಕ್ಷೆಗಳನ್ನು ಎನ್ಟಿಎ ನಡೆಸಲಿದ್ದು, ಎನ್ಇಟಿ ಡಿಸೆಂಬರ್ ನಲ್ಲಿ ಮತ್ತು ಜೆಇಇ ವರ್ಷದ ಎರಡು ಬಾರಿ, ಜನವರಿ ಮತ್ತು ಏಪ್ರಿಲ್ ನಲ್ಲಿ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಎನ್ ಟಿಎ ಅಂತರಾಷ್ಟ್ರೀಯ ಮಾನದಂಡಗಳನ್ನು ಅನುಸರಿಸಿ ಅತ್ಯಂತ ಸುರಕ್ಷಿತವಾಗಿ ಈ ಪರೀಕ್ಷೆಗಳನ್ನು ನಡೆಸಲಿದೆ. ಇನ್ನು ಮುಂದೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದಿಲ್ಲ ಮತ್ತು ಇದು ವಿದ್ಯಾಥರ್ಿ ಸ್ನೇಹಿಯಾಗಿದೆ ಎಂದು ಜಾವಡೇಕರ್ ವರದಿಗಾರರಿಗೆ ತಿಳಿಸಿದ್ದಾರೆ.
ಪರೀಕ್ಷೆಗಳು ಸಂಪುರ್ಣ ಕಂಪ್ಯೂಟರ್ ಆಧಾರಿತವಾಗಿದ್ದು, ನಾಲ್ಕು ಐದು ದಿನ ಪರೀಕ್ಷೆಗಳು ನಡೆಯುತ್ತವೆ. ವಿದ್ಯಾಥರ್ಿಗಳು ತಮಗೆ ಅನುಕೂಲವಾದ ದಿನಾಂಕವನ್ನು ಆಯ್ಕೆ ಮಾಡಿಕೊಂಡು ಕಂಪ್ಯೂಟರ್ ಕೇಂದ್ರಗಳಿಗೆ ಹೋಗಿ ಪರೀಕ್ಷೆ ಬರೆಯಬಹುದಾಗಿದೆ ಎಂದು ಅವರು ಹೇಳಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 