ಎನ್‌ಎಂಎಂಎಸ್ ಹಾಜರಾತಿ ಕಡ್ಡಾಯ: ಕೂಲಿಕಾರರು ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಹಾಜರಾಗಬೇಕು
NMMS attendance mandatory: Workers must report for work at 6 AM
ಗದಗ, ಆ.5: ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ವಿ.ಬಿ.ಜಿ. ರಾಮ್-ಜಿ) ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿಕಾರರಿಗೆ ಪ್ರತಿದಿನ ?382 ಕೂಲಿ ನೀಡಲಾಗುತ್ತಿದ್ದು, ಎನ್‌ಎಂಎಂಎಸ್ ತಂತ್ರಾಂಶದಲ್ಲಿ ಹಾಜರಾತಿ ಕಡ್ಡಾಯವಾಗಿ ದಾಖಲಿಸಬೇಕು ಎಂದು ತಾಪಂ ಸಹಾಯಕ ನಿರ್ದೇಶಕ (ಗ್ರಾಮೀಣ) ಕುಮಾರ ಪೂಜಾರ ತಿಳಿಸಿದರು. ಗದಗ ತಾಲ್ಲೂಕಿನ ಯಲಿಶಿರೂರು ಗ್ರಾಮದಲ್ಲಿ ಯೋಜನೆಯಡಿ ನಡೆಯುತ್ತಿರುವ ಸಮುದಾಯ ಕಾಮಗಾರಿಯನ್ನು ಪರೀಶೀಲಿಸಿ ಅವರು ಮಾತನಾಡಿದರು.
ಯೋಜನೆಯಡಿ ಕಾರ್ಯನಿರ್ವಹಿಸುವ ಎಲ್ಲ ಕೂಲಿಕಾರರು ಹಾಗೂ ಕಾರ್ಯಬಂಧುಗಳು ಪ್ರತಿದಿನ ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಹಾಜರಾಗಬೇಕು. ಎನ್‌ಎಂಎಂಎಸ್ ತಂತ್ರಾಂಶದಲ್ಲಿ ದಿನಕ್ಕೆ ಎರಡು ಬಾರಿ ಹಾಜರಾತಿ ದಾಖಲಿಸುವುದು ಕಡ್ಡಾಯವಾಗಿದೆ ಎಂದು ಅವರು ತಿಳಿಸಿದರು. ಪ್ರಸ್ತುತ ಕೂಲಿ ಮೊತ್ತವನ್ನು ?382ಕ್ಕೆ ಹೆಚ್ಚಿಸಲಾಗಿದ್ದು, ನಿಗದಿತ ಅಳತೆಯಂತೆ ಕೆಲಸ ಪೂರ್ಣಗೊಳಿಸಿದವರಿಗೆ ಮಾತ್ರ ಪೂರ್ಣ ಕೂಲಿ ದೊರೆಯುತ್ತದೆ. ಗ್ರಾಮೀಣ ಪ್ರದೇಶದ ಅಕುಶಲ ಕಾರ್ಮಿಕರಿಗೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗಾವಕಾಶ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.
ಕೆರೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸುವುದು ಹಾಗೂ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಯೋಜನೆ ನೆರವಾಗಲಿದೆ. ಉದ್ಯೋಗ ಚೀಟಿ ಹೊಂದಿರುವ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 125 ದಿನಗಳ ಉದ್ಯೋಗ ನೀಡಲಾಗುತ್ತಿದ್ದು, ಮಹಿಳೆ-ಪುರುಷ ಎಂಬ ಭೇದವಿಲ್ಲದೆ ಸಮಾನ ಕೂಲಿ ನೀಡಲಾಗುತ್ತಿದೆ ಎಂದು ವಿವರಿಸಿದರು. ಪರೀಶೀಲನಾ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ ವಾಲಿ, ತಾಪಂ ಐಇಸಿ ಸಂಯೋಜಕ ವೀರೇಶ್ ಬಸನಗೌಡ್ರ, ತಾಂತ್ರಿಕ ಸಹಾಯಕ ಮಂಜುನಾಥ ತಳವಾರ, ಬಿಎಫ್ಟಿ ದುರ್ಗಪ್ಪ ಆಲೂರ ಸೇರಿದಂತೆ ಅಧಿಕಾರಿಗಳು, ಕಾರ್ಯಬಂಧುಗಳು ಹಾಗೂ ಕೂಲಿಕಾರರು ಉಪಸ್ಥಿತರಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 