ಯೂರೋಪ್ ಪ್ರಯಾಣಕ್ಕೆ 30 ದಿನಗಳ ಕಾಲ ಅವಕಾಶವಿಲ್ಲ : ಟ್ರಂಪ್
, ಮಾ 12,ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೊರೊನಾ ಸೋಂಕು ತಡೆಗೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಮಧ್ಯರಾತ್ರಿಯಿಂದ 30 ದಿನಗಳ ಕಾಲ ಯೂರೋಪ್ ಖಂಡಕ್ಕೆ ಎಲ್ಲ ಬಗೆಯ ಪ್ರವಾಸದ ಮೇಲೆ ನಿರ್ಬಂಧ ಹೇರಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಮುಂದಿನ 30 ದಿನಗಳ ಕಾಲ ಯೂರೋಪ್ ನಿಂದ ಅಮೆರಿಕಕ್ಕೆ ಪ್ರಯಾಣ ನಿರ್ಬಂಧಿಸಲಾಗಿದೆ. ಈ ನಿಯಮ ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ ಎಂದು ಬುಧವಾರ ತಡರಾತ್ರಿ ಟ್ರಂಪ್ ಮಾಹಿತಿ ನೀಡಿದ್ದಾರೆ. ಸೂಕ್ತ ತಪಾಸಣೆಗೆ ಒಳಪಡುವ ಅಮೆರಿಕದ ಪ್ರಜೆಗಳಿಗೆ ವಿನಾಯಿತಿ ನೀಡಲಾಗುವುದು. ಈ ನಿಯಮ ಅಪಾರ ಪ್ರಮಾಣದ ಸರಕು ಸಾಗಣೆಗೂ ಅನ್ವಯವಾಗಲಿದೆ. ಯೂರೋಪ್ ನಿಂದ ಯಾವುದೇ ವಸ್ತು ಆಮದು ಮಾಡಿಕೊಳ್ಳಲು ಸಹ ನಿರ್ಬಂಧ ಹೇರಲಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಯುನೈಟೆಡ್ ಕಿಂಗ್ಡಮ್ ಗೆ ಈ ಪ್ರಯಾಣ ನಿರ್ಬಂಧ ಅನ್ವಯವಾಗುವುದಿಲ್ಲಾ ಎಂದೂ ಸಹ ಟ್ರಂಪ್ ತಿಳಿಸಿದ್ದಾರೆ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 