ಕರೋನ ನಡುವೆಯೇ ಯುಪಿಯಲ್ಲಿ ಶುರುವಾಯ್ತು ಹಂದಿಜ್ವರ....!!
ಲಕ್ನೋ, ಮಾ 6, ಮಾರಕ ಕರೋನವೈರಸ್ ಆತಂಕದ ನಡುವೆ ಈಗ ಉತ್ತರ ಪ್ರದೇಶದಲ್ಲಿ ಹಂದಿ ಜ್ವರ ಹೆಚ್ಚಾಗಿ ಮೀರತ್ನಲ್ಲಿ ಎಂಟು ಜನ ಸಾವನ್ನಪ್ಪಿರುವುದು ಜನತೆಯನ್ನು ಆತಂಕಕ್ಕೆ ನೂಕಿದೆ. ಒಟ್ಟು 81 ಪಾಸಿಟಿವ್ ಜ್ವರ ಪ್ರಕರಣಗಳು ವರದಿಯಾಗಿವೆ.ಈ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು 20 ಪ್ರಾಂತೀಯ ಸಶಸ್ತ್ರ ಕಾನ್ಸ್ಟಾಬ್ಯುಲರಿ (ಪಿಎಸಿ) ಸಿಬ್ಬಂದಿ ಸೇರಿದಂತೆ 81 ಜನರಲ್ಲಿ ಈ ರೋಗ ಸೋಂಕು ಕಾಣಿಸಿಕೊಂಡಿದೆ ಎಂದು ಖಚಿತ ಪಡಿಸಿದ್ದಾರೆ. 20 ಪಿಎಸಿ ಸಿಬ್ಬಂದಿ ಸೇರಿದಂತೆ 81 ರೋಗಿಗಳು ಹಂದಿ ಜ್ವರಕ್ಕೆ ತುತ್ತಾಗಿದ್ದು 11 ಸಿಬ್ಬಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಇತರ 9 ಪಿಎಸಿ ಜವಾನರನ್ನು 5 ದಿನಗಳ ನಂತರ ಬಿಡುಗಡೆ ಮಾಡಲಾಗುವುದು ಇಲ್ಲಿಯವರೆಗೆ 387 ಜನರ ರಕ್ತದ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದೂ ಅವರು ಹೇಳಿದ್ದಾರೆ. ಈ ಸಾವುಗಳ ಪರಿಶೀಲನೆಗಾಗಿ ಉತ್ತರ ಪ್ರದೇಶ ಸರ್ಕಾರ ಉನ್ನತ ವೈದ್ಯಕೀಯ ತಂಡ ರಚಿಸಿದೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 