ನರೇಗಾ ಇ-ಕೆವೈಸಿ : ಹಳಿಯಾಳ ತಾಲೂಕು ಪ್ರಥಮ
NREGA e-KYC: Haliyal taluk becomes first
ಕಾರವಾರ 18: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಖಾತರಿ ಯೋಜನೆ ಕಾಮಗಾರಿಗಳಲ್ಲಿ ಕೆಲಸ ಮಾಡುವ ಕೂಲಿಕಾರರ ಹಾಜರಾತಿಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಇಕೆವೈಸಿ ಪ್ರಾರಂಭಿಸಲಾಗಿದ್ದು, ಈ ಕಾರ್ಯದಲ್ಲಿ ಶೇ 93.41 ರಷ್ಟು ಗುರಿ ಸಾಧಿಸುವ ಮೂಲಕ ಹಳಿಯಾಳ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ.
ಹಳಿಯಾಳ ತಾಲೂಕಿನ 20 ಗ್ರಾಮ ಪಂಚಾಯತಿಗಳಲ್ಲಿನ ಒಟ್ಟು 20,792 ರಷ್ಟು ಸಕ್ರಿಯ ಕೂಲಿಕಾರರಲ್ಲಿ , 19,421 ಕೂಲಿಕಾರರ ಇಕೆವೈಸಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು 1,371 ಬಾಕಿ ಇದೆ. ತಾಲೂಕಿನಲ್ಲಿಯೇ ಒಂದೇ ಗ್ರಾಮವನ್ನು ಹೊಂದಿರುವ ತೆರಗಾಂವ ಗ್ರಾಮ ಪಂಚಾಯತಿಯು ಶೇ 100 ರಷ್ಟು ಗುರಿಯನ್ನು ಸಾಧಿಸುವ ಮೂಲಕ ತಾಲೂಕಿನಲ್ಲಿಯೇ ಉತ್ತಮ ಪ್ರಗತಿ ಸಾಧಿಸಿ ಪ್ರಥಮ ಸ್ಥಾನದಲ್ಲಿದೆ.
ತಾಲೂಕಿನಲ್ಲಿ ಸಿಬ್ಬಂದಿಗಳ ಕೊರತೆಯಿದ್ದರೂ ಕಾರ್ಯ ನಿರ್ವಾಹಕ ಅಧಿಕಾರಿಗಳ ನಿರ್ದೇಶನ ಹಾಗೂ ಮುಂದಾಳತ್ವದಲ್ಲಿ ಉತ್ತಮ ಪ್ರಗತಿ ಸಾಧಿಸಿದ್ದು, ತಾಲೂಕ ಪಂಚಾಯತನ ನರೇಗಾ ಸಿಬ್ಬಂದಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯ ಪ್ರಶಂಸನೀಯವಾಗಿದೆ.
ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಅಭಿಯಾನಗಳ ರೂಪದಲ್ಲಿ ಹಾಗೂ ಮನೆ ಮನೆಗೆ ತೆರಳಿ ಇಕೆವೈಸಿ ಮಾಡಿದ್ದರಿಂದ 14 ಗ್ರಾಮ ಪಂಚಾಯತಿಗಳು ಶೇ.90 ಗಡಿಯಲ್ಲಿದ್ದು, ಅರ್ಲವಾಡ ಹಾಗೂ ಮುರ್ಕವಾಡ ಗ್ರಾಪಂ ಗಳು ಶೇ.97 ರಷ್ಟು ಪ್ರಗತಿ ಸಾಧಿಸಿ ಮುಂಚೂಣಿಯಲ್ಲಿದ್ದು, ಶೀಘ್ರದಲ್ಲಿ ಇಡೀ ತಾಲೂಕಿನಲ್ಲಿ ಶೇ.100 ಗುರಿ ಸಾಧಿಸಲು ಯೋಜನೆ ರೂಪಿಸಲಾಗಿದೆ ಎಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವಿಲಾಸರಾಜ ಪ್ರಸನ್ನ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 