ಮುದ್ದೆಬಿಹಾಲ್

ಬರಗಾಲ ಸಮರ್ಪಕ ನಿರ್ವಹಣೆಗೆ ನರೇಗಾ ಸಹಕಾರಿ: ಇಒ ಕಲ್ಮನಿ

ಬರಗಾಲ ಸಮರ್ಪಕ ನಿರ್ವಹಣೆಗೆ ನರೇಗಾ ಸಹಕಾರಿ: ಇಒ ಕಲ್ಮನಿ

ಮುದ್ದೇಬಿಹಾಳ 29: ಬರಗಾಲವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ನರೇಗಾ ಯೋಜನೆ ಸಹಕಾರಿಯಾಗಿದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಯಕಬಂಧುಗಳು ಜನರಿಗೆ ಕೆಲಸ ಒದಗಿಸಲು ಮುಂದಾಗಬೇಕು. ಕೆಲಸದ ಬೇಡಿಕೆ ಅರ್ಜಿಗಳನ್ನು ಸಂಗ್ರಹಿಸಿ ಗ್ರಾಮ ಪಂಚಾಯತಿಗೆ ಸಲ್ಲಿಸಿದರೆ, ಏಪ್ರಿಲ್ 1 ರಿಂದ ಬೇಡಿಕೆಗೆ ಅನುಗುಣವಾಗಿ ಕೆಲಸ ನೀಡಲಾಗುವುದು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್‌.ಎಸ್‌.ಕಲ್ಮನಿ ತಿಳಿಸಿದರು. 

ತಾಲೂಕು ಪಂಚಾಯತಿ ಸಭಾಭವನದಲ್ಲಿ ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನದ ಅಂಗವಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಯಕಬಂಧುಗಳಿಗೆ ಬುಧವಾರ ಆಯೋಜಿಸಲಾಗಿದ್ದ ಕಾಯಕಬಂಧುಗಳಿಗೆ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಕಾಯಕಬಂಧುಗಳು ಮೊದಲು ಸಂಘಟಿತರಾಗಬೇಕು. ಸಕ್ರಿಯ ನರೇಗಾ ಕೂಲಿಕಾರರನ್ನು ಒಗ್ಗೂಡಿಸಿ ಕೆಲಸಕ್ಕೆ ಬರುವಂತೆ ಪ್ರೇರೆಪಿಸಬೇಕು. ಒಂದು ಗ್ರಾಮ ಪಂಚಾಯತಿಯಲ್ಲಿ ಕನಿಷ್ಟ 600 ರಿಂದ 800 ವರೆಗೆ ಕೂಲಿಕಾರರಿಗೆ ಕೆಲಸ ಒದಗಿಸಲು ಕಾಯಕಬಂಧುಗಳು ಸನ್ನದ್ಧರಾಗಬೇಕು. ನಿಮ್ಮ ಜವಾಬ್ದಾರಿಗಳನ್ನು ಅರಿತು ಕೆಲಸ ಮಾಡಿ ಎಂದು ಸಲಹೆ ನೀಡಿದರು. 

ಸಹಾಯಕ ನಿರ್ದೆಶಕರು (ಪಂ.ರಾ.) ಖುಬಾಸಿಂಗ್ ಜಾಧವ್ ಮಾತನಾಡಿ, ಕಾಯಕಬಂಧುಗಳ ಕರ್ತವ್ಯ, ನಿರ್ವಹಿಸಬೇಕಾದ ಕೆಲಸಗಳು ಮತ್ತು ನರೇಗಾ ಕೂಲಿಕಾರರ ಹಕ್ಕುಗಳ ಬಗ್ಗೆ ತಿಳಿಸಿದರು. 

2024-2025 ನೇ ಸಾಲಿನ ಆರ್ಥಿಕ ವರ್ಷದಲ್ಲಿ ನರೇಗಾ ಯೋಜನೆಯ ಸಮರ​‍್ಕ ಅನುಷ್ಟಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ನರೇಗಾ ಕೂಲಿಕಾರರು ಕೆಲಸದ ಬೇಡಿಕೆ ಅರ್ಜಿ ಸಲ್ಲಿಸಿದರೆ ಕೆಲಸ ನೀಡಲಾಗುವುದು ಎಂದು ಸಹಾಯಕ ನಿರ್ದೆಶಕರು (ಗ್ರಾ.ಉ.) ಪಿ.ಎಸ್‌.ಕಸನಕ್ಕಿ ತಿಳಿಸಿದರು. 

ತಾಲೂಕು ಪಂಚಾಯತ ತಾಂತ್ರಿಕ ಸಂಯೋಜಕ ಶಂಕರಗೌಡ ಯಾಳವಾರ, ತಾಲೂಕು ನರೇಗಾ ಐಇಸಿ ಸಂಯೋಜಕ ಪರಮೇಶ ಹೊಸಮನಿ, ಬಿಎಫ್‌ಟಿಗಳು, ಗ್ರಾಮ ಕಾಯಕಮಿತ್ರರು ಇದ್ದರು. 


ಸುದ್ದಿ ಓದಿ