ಬಳಗಾನೂರನಲ್ಲಿ ಎನ್‌ಎಸ್‌ಎಸ್‌ನ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಗದಗ 13: ತಾಲೂಕಿನ ಬಳಗಾನೂರು ಗ್ರಾಮದ ಚಿಕೇನಕೊಪ್ಪದ ಶ್ರೀ ಚನ್ನವೀರ ಶರಣರ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ನಡೆಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರಾದ ಶೇಖಪ್ಪ ಎಸ್ ಅಗಸಿಮನಿ, ಶೇಖಪ್ಪ ಎಚ್.ಅಗಸಿಮನಿ, ಶ್ರೀಮತಿ ಶಿವಲಿಂಗವ್ವಜಿ ಗಳೂರು, ಶೈಕ್ಷಣಿಕ ಸಂಯೋಜಕರಾದ ಎಚ್. ಬಿ. ಯಲಬುರ್ಗಿ ಹಾಗೂ ಕಾಲೇಜಿನ ಪ್ರಾಚಾರ್ಯರಾದ ಎಸ್. ಬಿ. ಹಿರೇಮಠ ಮತ್ತು ಉಪನ್ಯಾಸಕರು ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಎಸ್. ಬಿ. ಹಿರೇಮಠ ಅವರು ಮಾತನಾಡಿ, ಎನ್‌ಎಸ್‌ಎಸ್‌ನ ಹಿನ್ನೆಲೆ, ಉದ್ದೇಶ ಹಾಗೂ ಅಗತ್ಯತೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮದ ಹಿರಿಯರಾದ ಶೇಖಪ್ಪ ಎಸ್ ಅಗಸಿಮನಿ ಅವರು ಮಾತನಾಡಿ, ವಿದ್ಯಾರ್ಥಿಗಳು ಸೇವಾ ಮನೋಭಾವನೆ ಬೆಳೆಸಿಕೊಂಡು ಸಮಾಜಕ್ಕೆ ಉತ್ತಮ ಸಂದೇಶ ಮತ್ತು ಸೇವೆ ನೀಡಬೇಕೆಂದು ಕರೆ ನೀಡಿದರು.