ರಾಣೆಬೆನ್ನೂರ

ಎನ್‌ಎಸ್‌ಎಸ್ ಶಿಬಿರಗಳು ಗ್ರಾಮಗಳ ಅಭಿವೃದ್ಧಿಗೆ ಪೂರಕ

ಎನ್‌ಎಸ್‌ಎಸ್ ಶಿಬಿರಗಳು ಗ್ರಾಮಗಳ ಅಭಿವೃದ್ಧಿಗೆ ಪೂರಕ


ಲೋಕದರ್ಶನ ವರದಿ 

ರಾಣೇಬೆನ್ನೂರು 04:  ರಾಷ್ಟ್ರೀಯ ಸೇವಾ ಯೋಜನೆಯ ಗ್ರಾಮೀಣ ಭಾಗದ ವಾರ್ಷಿಕ ವಿಶೇಷ ಶಿಬಿರಗಳು ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗಿದೆ. ಗ್ರಾಮಗಳನ್ನು ದತ್ತು ತೆಗೆದುಕೊಂಡು ಆ ಗ್ರಾಮದ ಜನರಲ್ಲಿ ವಿವಿಧ ವಿಷಯಗಳ ಅರಿವು ಮೂಡಿಸುವುದು ಹಾಗೂ ಸರ್ಕಾರದ ಯೋಜನೆಗಳ ಕುರಿತು ಜನರಿಗೆ ತಿಳಿಹೇಳುವುದರಿಂದ ಗ್ರಾಮಸ್ಥರಿಗೆ ಅವುಗಳ ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಪಥದತ್ತ ಸಾಗಲು ನೆರವಾಗುವುದು ಎಂದು ತಾಲ್ಲೂಕಿನ ಕಮದೋಡ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಂಜುನಾಥ ಮರಿನಗಮ್ಮನವರ ಅಭಿಪ್ರಾಯಪಟ್ಟರು. 

ಅವರು ರಾಣೇಬೆನ್ನೂರು ತಾಲೂಕಿನ ಕಮದೋಡ ಗ್ರಾಮದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕಗಳು ಆಯೋಜಿಸಿದ “ವಿಶೇಷ ವಾರ್ಷಿಕ ಶಿಬಿರ” ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಎನ್‌ಎಸ್‌ಎಸ್ ಅಧಿಕಾರಿ ಡಾ.ಅರುಣಕುಮಾರ ಚಂದನ್ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರದ ಧ್ಯೇಯೋದ್ದೇಶಗಳನ್ನು ವಿವರಿಸಿದರು. ಪ್ರಾಂಶುಪಾಲರಾದ ಎಲ್‌.ವಿ.ಸಂಗಳದ ಅಧ್ಯಕ್ಷತೆವಹಿಸಿಕೊಂಡು ಮಾತಾಡುತ್ತಾ, ವಿದ್ಯಾರ್ಥಿಗಳಿಗೆ ಎನ್‌ಎಸ್‌ಎಸ್ ನಂತಹ ಪಠ್ಯೇತರ ಚಟುವಟಿಕೆಗಳ ಮೂಲಕ ಗ್ರಾಮೀಣ ಭಾಗದ ಜೀವನಾನುಭವ ಹಾಗೂ ನಾಯಕತ್ವಗುಣಗಳನ್ನು ಬೆಳೆಸಲಾಗುತ್ತಿದೆ ಎಂದರು. ಇನ್ನೋರ್ವ ಎನ್‌ಎಸ್‌ಎಸ್ ಅಧಿಕಾರಿ ಡಾ.ಸಿದ್ದಲಿಂಗಮ್ಮ ಬಿ.ಜಿ. ಸ್ವಾಗತಿಸಿದರು, ಐಕ್ಯೂಎಸಿ ಸಂಚಾಲಕರಾದ ಎಸ್‌.ಬಿ.ಪಾಟೀಲ ವಂದಿಸಿದರು. ಕಾಲೇಜಿನ ಎನ್‌ಎಸ್‌ಎಸ್ ಘಟಕ-1 ಹಾಗೂ 2ರ ಒಟ್ಟು 100 ಸ್ವಯಂ ಸೇವಕರು ಶಿಬಿರದಲ್ಲಿ ಪಾಲ್ಗೊಂಡಿದ್ದು, ಏಳು ದಿನಗಳ ಕಾಲ ಶಿಬಿರ ಗ್ರಾಮದಲ್ಲಿ ನಡೆಯಲಿದೆ. ಕಮದೋಡ ಗ್ರಾಮದ ಮುಖಂಡರುಗಳು, ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. 

ಶ್ರದ್ಧಾಂಜಲಿ: 

      ಕ್ರೇನ್‌ನಲ್ಲಿ ನಡೆದ ಶೆಲ್ ದಾಳಿಯಲ್ಲಿ ಮೃತಪಟ್ಟ ತಾಲೂಕಿನ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡ್ರ ಹಾಗೂ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾಲೇಜಿನ ವಿದ್ಯಾರ್ಥಿ ಅಭಿಶೇಕ ಮೂಕಮ್ಮನವರ ಇವರುಗಳ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು. 


ಸುದ್ದಿ ಓದಿ