ಸಾಯಿ ಪಿ.ಯು. ಕಾಲೇಜಿನಲ್ಲಿ ಎನ್‌ಎಸ್‌ಎಸ್ ಘಟಕ ಉದ್ಘಾಟನೆ
NSS unit inaugurated at Sai PU College
ಧಾರವಾಡ 13: ನಾಡಿನ ಬಜೆಟ್‌ನ ಒಟ್ಟು ಮೊತ್ತವನ್ನು ತಕ್ಕಡಿಯ ಒಂದು ಭಾಗದಲ್ಲಿ ಇಟ್ಟು ಮೊತ್ತೊಂದು ಭಾಗದಲ್ಲಿ ಮಕ್ಕಳ ನಗುವನ್ನು ಇಟ್ಟಾಗ ಅಲ್ಲಿ ತೂಕ ಹೆಚ್ಚಾಗುವುದು ಮಗುವಿನ ನಗುವೆ ಆಗಿದೆ ಎಂದು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡದ ಅಧ್ಯಕ್ಷ ಸಂಗಮೇಶ ಅ. ಬಬಲೇಶ್ವರ ಹೇಳಿದರು. ನಗರದ ಶ್ರೀಸಾಯಿ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ನೂತನ ಘಟಕವನ್ನು ಸಸಿಗೆ ನೀರುಣಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಸಾಧನೆಯನ್ನು ಇಂದೇ ಮರೆತಾಗ ನಾಳೆ ಇನ್ನು ಹೆಚ್ಚು ಸಾಧನೆ ಮಾಡಲು ಪ್ರೇರಕವಾಗುತ್ತದೆ ಎಂದು ಹೇಳಿದರು.
ಸಂಸ್ಥೆಯ ಅಧ್ಯಕ್ಷ ಡಾ. ವೀಣಾ ಬಿರಾದಾರ, ಇವರು ರಾಷ್ಟ್ರೀಯ ಸೇವಾ ಯೋಜನಾ ನೂತನ ಘಟಕದ ಕಾರ್ಯ ಅದರ ದೇಯೋದ್ದೇಶ ಅದರಿಂದ ಆಗುವ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಸಂಸ್ಥೆಯ ನಿರ್ದೇಶಕ ಡಾ. ಎಸ್.ಬಿ. ಗಾಡಿ, ಧಾರವಾಡ ಜಿಲ್ಲಾ ರಾಷ್ಟ್ರೀಯ ಸೇವಾ ಯೋಜನೆ ಘಟಕದ ನೋಡಲ್ ಅಧಿಕಾರಿ ರಾಜಕುಮಾರ ಎಸ್. ಭಜಂತ್ರಿ, ಶಾಲಾ ಶಿಕ್ಷಣ ಇಲಾಖೆ, ಧಾರವಾಡದ ಪ್ರಭಾರಿ ಉಪನಿರ್ದೇಶಕ ಡಾ. ಸಯ್ಯದ, ಸಾಯಿ ಕಾಲೇಜಿನ ಪ್ರಾಚಾರ್ಯ ನಾಗರಾಜ ಶಿರೂರ ಮತ್ತು ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಮತ್ತು ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಘಟಕದ ಸಂಯೋಜಕ ಡಾ. ಬಾಪು ಮೊರಂಕರ ಸ್ವಾಗತಿಸಿದರು. ಮೌನೇಶ ಬಡಿಗೇರ ನಿರೂಪಿಸಿ, ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 