ರಾಣೆಬೆನ್ನೂರ

20ರಂದು ನಾಡ ಹಬ್ಬ ಕಾರ್ಯಕ್ರಮ

20ರಂದು ನಾಡ ಹಬ್ಬ ಕಾರ್ಯಕ್ರಮ

ರಾಣೇಬೆನ್ನೂರು 18:  ಇಲ್ಲಿನ ವಾಗೀಶ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಅಕ್ಟೋಬರ್ 20ರಂದು, ಶುಕ್ರವಾರ ಸಂಜೆ 5:00 ಗಂಟೆಗೆ, ಪ್ರತಿ ವರ್ಷದ ಸಂಪ್ರದಾಯದಂತೆ 26ನೆಯ ನಾಡಹಬ್ಬ -2023 ರ ಕಲೆ ಸಾಹಿತ್ಯ ಸಂಗೀತ ಮತ್ತು ಸಂಸ್ಕೃತಿಗೆ ಸಂಬಂಧಿಸಿದಂತೆ ಅನೇಕ ಸ್ಪರ್ಧಾತ್ಮಕ ಕಾರ್ಯಕ್ರಮಗಳ ಮೂಲಕ ಆಯೋಜಿಸಲಾಗಿದೆ ಎಂದು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಅಂದು ಶುಕ್ರವಾರ ಸಂಜೆ 5, ಘಂಟೆಯಿಂದ  ಆರಂಭವಾಗುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ ವಹಿಸುವರು. ವಿಧಾನಸಭಾ ಕ್ಷೇತ್ರದ ಶಾಸಕ ಪ್ರಕಾಶ್ ಕೆ. ಕೋಳಿವಾಡ ಅವರು ನಾಡ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಎಚ್‌. ಪಾಟೀಲ್, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಡಾ: ಕೆ. ಎಚ್‌.ಮುಕ್ಕಣ್ಣನವರ, ವರ್ತಕರ ಸಂಘದ ಅಧ್ಯಕ್ಷ ಜಿ.ಜಿ.ಹೊಟ್ಟಿಗೌಡ್ರ, ಕೃಷಿ ಪದವೀಧರರ ಸಂಘದ ಅಧ್ಯಕ್ಷ ಹೆಚ್‌. ಎನ್‌.ದೇವಕುಮಾರ್, ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವೀರೇಶ ಜಂಬಿಗಿ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಳ್ಳುವರು. ಮಕ್ಕಳ ಸಾಹಿತ್ಯ ವೇದಿಕೆ ಅಧ್ಯಕ್ಷ ಜಯಶ್ರೀ ಮುರುಡೆಪ್ಪನವರ,ಅವರು, " ನಾಡ ದೇವಿ ಮಹಾತ್ಮೆ " ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯ ಸಂಶೋಧಕಿ, ದೀಪಾ ಕೊಟ್ಟದ " ನಾಡಹಬ್ಬದ ವೈಶಿಸ್ಟೈ - ಪರಂಪರೆ" ವಿಷಯವಾಗಿ ಉಪನ್ಯಾಸ ನೀಡುವರು. ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರು, ಸಾಹಿತಿಗಳು, ಕಲಾವಿದರು, ಯುವ ಕಲಾವಿದರು  ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೊಳಿಸಲು ಪರಿಷತ್ತು ತನ್ನ ಪ್ರಕಟಣೆಯಲ್ಲಿ ಕೋರಿದ್ದಾರೆ. 


ಸುದ್ದಿ ಓದಿ