ಕಾರವಾರ

ಕಾರವಾರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಕಾರವಾರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಲೋಕದರ್ಶನ ವರದಿ 

ಕಾರವಾರ 27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ, ಕಾರವಾರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಶನಿವಾರ ಆಚರಿಸಲಾಯಿತು.ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ್, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವ್ ಕುಮಾರ್, ಚುನಾವಣಾ ಶಾಖೆಯ ತಹಸೀಲ್ದಾರ್ ಪ್ರಮೋದ್ ನಾಯಕ ಉಪಸ್ಥಿತರಿದ್ದರು.ಕಾರವಾರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಹೇಮಲತಾ ಕೆ ಉಪನ್ಯಾಸ ನೀಡಿದರು. ಮಾದಕ ವಸ್ತು ವ್ಯಸನ ಬಿಡಿ, ಸಾಧನೆ ಮಾಡಿ : ಎಸ್ಪಿ ದೀಪನ್‌.ಮಾದಕ ಪದಾರ್ಥಗಳಿಗೆ  ವ್ಯಸನಿಗಳು ಆಗುವುದರಿಂದ ಜೀವನದಲ್ಲಿ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ.

ಯುವಕ-ಯುವತಿಯರ ಯಶಸ್ಸಿಗೆ ಡ್ರಗ್ಸ್‌ ಅಡ್ಡಿಯಾಗುತ್ತದೆ ಆದ್ದರಿಂದ ಯುವ ಜನತೆಗೆ ಡ್ರಗ್ಸ್‌ ಬಳಕೆಯಿಂದ ದೂರವಿರಬೇಕು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ದೀಪನ್‌. ಎಂ. ಎನ್ ಹೇಳಿದರು.ಅವರು ಶನಿವಾರ,ಮಯೂರ ವರ್ಮ ವೇದಿಕೆಯಲ್ಲಿ,ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಕಾರವಾರ ಉಪ ವಿಭಾಗ, ಕಾರವಾರ ಶಹರ ಪೊಲೀಸ್ ಠಾಣೆ ವತಿಯಿಂದ ಆಯೋಜಿಸಿದ್ದ, ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ಸಪ್ತಾಹ, ಮಾದಕ ವಸ್ತುಗಳ ಬಳಕೆ ಮತ್ತು ಪೂರೈಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರುಡ್ರಗ್ಸ್‌ ಕ್ಯಾನ್ಸರ್ ಇದ್ದಂತೆ,ಅದುಸಮಾಜಕ್ಕೆ  ಮಾರಕವಾಗಿ ಪರಿಣಿಮಿಸಿದ್ದು, ಇದು ಸಮಾಜದಲ್ಲಿ ವ್ಯಾಪಕವಾಗಿ ಹರಡದಂತೆ ತಡೆಯಬೇಕು.

ಪೊಲೀಸ್ ಇಲಾಖೆಯಿಂದ ಜಿಲ್ಲೆಯ ಪ್ರತಿ ತಾಲೂಕಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸನಿಂದ ಉಂಟಾಗುವ ದುಷ್ಪರಿಣಾಮದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.ಡ್ರಗ್ಸ ಸೇವನೆ ಮತ್ತು  ಮಾರಾಟ ಮಾಡುವವರ ಮೇಲೆ ಕಠಿಣ ಕಾನೂನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಮಯೂರ ವರ್ಮ ವೇದಿಕೆಯಿಂದ ಡಿ.ಸಿ ಆಫೀಸ್ ವೃತ್ತ,ಪಿಕಳೆ ರಸ್ತೆ,ಗ್ರೀನ್ ಸ್ಟ್ರೀಟ್, ಸುಭಾಷ್ ಸರ್ಕಲ್,ಬಸ್ ನಿಲ್ದಾಣ ಸೇರಿದಂತೆ ವಿವಿಧ ಬೀದಿಗಳಲ್ಲಿ ಡ್ರಗ್ಸ್‌ ಕುರಿತು  ಜಾಥಾ ಮೂಲಕ ಜಾಗೃತಿ ಮೂಡಿಸಲಾಯಿತು.  ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದರು. 


ಸುದ್ದಿ ಓದಿ