ಡಾ. ಬಿ.ವಿ. ಪೂರ್ಣಿಮಾಗೆ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ
Nadaprabhu Kempegowda State Award for Dr. B.V. Poornima
ಲೋಕದರ್ಶನ ವರದಿ
ಬೆಂಗಳೂರು, ಆ. 11: ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಹಿತ್ಯ ಕ್ಷೇತ್ರಗಳಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿರುವ ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂಡಳಿಯ ಸಂಸ್ಥಾಪಕ ಅಧ್ಯಕ್ಷೆ ಡಾ. ಬಿ.ವಿ. ಪೂರ್ಣಿಮಾ ಅವರಿಗೆ 2026ನೇ ಸಾಲಿನ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕೀರ್ತಿ ಶೇಷ ಚೆನ್ನಮ್ಮ ದೇವೇಗೌಡ ಸ್ಮಾರಕ ವೇದಿಕೆ ವತಿಯಿಂದ ಬೆಂಗಳೂರಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ವಿಚಾರ ಸಂಕಿರಣ ಹಾಗೂ ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸುಮಾರು 32 ವರ್ಷಗಳಿಂದ ಆಧ್ಯಾತ್ಮಿಕ ಸೇವೆಯಲ್ಲಿ ತೊಡಗಿರುವ ಡಾ. ಪೂರ್ಣಿಮಾ ಅವರು ಆಧ್ಯಾತ್ಮಿಕ ಕಾರ್ಯಕ್ರಮಗಳ ಜೊತೆಗೆ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬಂದಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಚುಟುಕು, ಕವನ ಹಾಗೂ ಲೇಖನಗಳ ಮೂಲಕ ಗುರುತಿಸಿಕೊಂಡಿದ್ದು, ‘ಗಣಿನಾಡು ಸಾಹಿತಿ’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅವರ ಸೇವೆಯನ್ನು ಗುರುತಿಸಿ ಹಲವು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿವೆ. 2016ರಲ್ಲಿ ಅವರ ಗುರುಗಳು ಅವರಿಗೆ ‘ಸಹಸ್ರ ಭಜನಾ ಸಾಮ್ರಾಜ್ಞಿ’ ಎಂಬ ಬಿರುದನ್ನೂ ನೀಡಿದ್ದರು. ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ ಡಾ. ಪೂರ್ಣಿಮಾ ಅವರಿಗೆ ಗಣ್ಯರು ಅಭಿನಂದನೆ ಸಲ್ಲಿಸಿದರು. ಐಪಿಎಸ್ ಅಧಿಕಾರಿ ರಶ್ಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗಣ್ಯರು ಹಾಗೂ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 