ಇಂಡಿ

ಶ್ರದ್ಧೆ ಭಕ್ತಿಯಿಂದ ನಾಗರ ಪಂಚಮಿ ಹಬ್ಬ ಆಚರಣೆ

ಶ್ರದ್ಧೆ ಭಕ್ತಿಯಿಂದ ನಾಗರ ಪಂಚಮಿ ಹಬ್ಬ ಆಚರಣೆ

ಇಂಡಿ 09: ತಾಲೂಕಿನ್ಯಾದಂತ  ನಾಗರ ಪಂಚಮಿ ಹಬ್ಬವನ್ನು ಮಹಿಳೆಯರು ಅರ್ಥಪೂರ್ಣವಾಗಿ ಆಚರಣೆ ಮಾಡಿದರು. ಶ್ರಾವಣ ಮಾಸದಲ್ಲಿ ನಾವು ಸ್ವಾಗತಿಸುವ ಮೊದಲ ಹಬ್ಬ ನಾಗರ ಪಂಚಮಿ ಹಬ್ಬ. ನಾಗರ ಪಂಚಮಿ, ಹೆಸರೇ ಸೂಚಿಸುವಂತೆ ಶ್ರಾವಣ ಶುಕ್ಲ ಪಂಚಮಿಯಂದು ಆಚರಿಸಲಾಗುತ್ತದೆ.

ಇದು ಮುಂಬರುವ ಎಲ್ಲಾ ಹಬ್ಬಗಳಿಗೂ ಆದಿಯಾಗಿದೆ. ಮಹಿಳೆಯರು ಉಪವಾಸ ಆಚರಿಸುತ್ತಾರೆ, ಹೊಸ ಬಟ್ಟೆಗಳನ್ನು ಧರಿಸುತ್ತಾರೆ, ಆಭರಣಗಳನ್ನು ಧರಿಸುತ್ತಾರೆ. ತಮ್ಮ ಸಹೋದರನ ಆರೋಗ್ಯ ಮತ್ತು ಯಶಸ್ಸಿಗಾಗಿ ನಾಗದೇವತೆಗೆ ಪೂಜೆ ಸಲ್ಲಿಸುತ್ತಾರೆ. ನಾಗದೋಷ ನಿವಾರಣೆ, ನಾಗನಿಂದ ರಕ್ಷಣೆಗೆ ಪ್ರಾರ್ಥಿಸಿ ಆಚರಿಸುವ ಹಬ್ಬ ಇದು ಎಂದು ನಂಬಲಾಗಿದೆ.ಹಿಂದೂ ನಂಬಿಕೆಯ ಪ್ರಕಾರ, ಪ್ರಾಚೀನ ಕಾಲದಿಂದಲೂ ಹಾವುಗಳನ್ನು ದೇವರಂತೆ ಪೂಜಿಸಲಾಗುತ್ತದೆ. ಆದ್ದರಿಂದ ನಾಗರ ಪಂಚಮಿಯ ದಿನದಂದು ನಾಗರ ಹಾವುಗಳಿಗೆ ಪೂಜೆಯನ್ನು ಮಾಡುವುದು ಹೆಚ್ಚಿನ ಮಹತ್ವವನ್ನು ಹೊಂದಿದೆ. ನಾಗರ ಪಂಚಮಿಯ ದಿನದಂದು ಹಾವುಗಳನ್ನು ಪೂಜಿಸುವ ಜನರು ಹಾವು ಕಡಿತದಿಂದ ರಕ್ಷಣೆಯನ್ನು ಪಡೆದುಕೊಳ್ಳುತ್ತಾರೆ. ಈ ದಿನ ಹಾವಿಗೆ ಹಾಲಿನಿಂದ ಅಭಿಷೇಕವನ್ನು ಮಾಡಿದರೆ ಶಾಶ್ವತ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಈ ದಿನ ಮನೆಯ ಪ್ರವೇಶ ದ್ವಾರದಲ್ಲಿ ನಾಗಮೂರ್ತಿ ಮಾಡುವ ಸಂಪ್ರದಾಯವಿದೆ. ಇದು ಹಾವಿನ ಕಾಟದಿಂದ ಮನೆಯನ್ನು ರಕ್ಷಿಸುತ್ತದೆ ಎನ್ನುವ ನಂಬಿಕೆಯಿದೆ.ಇಂಡಿ ವಿದ್ಯಾ ನಗರದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿರುವ ನಾಗದೇವತೆಯ ಮೂರ್ತಿಗೆ ನಗರದ ಸಾವಿರಾರು ಮಹಿಳೆಯರು ಹಾಲು ಎರೆದು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಶಶಿಕಲಾ ಬೆಟಗೇರಿ, ಜ್ಯೋತಿ ಚಾಂದಕವಠೆ, ಭಾರತಿ ಖೌದಿ, ಸಪ್ನಾ ಚಾಂದಕವಠೆ, ಉಮಾ ಹಿರೇಮಠ, ಪಲ್ಲವಿ ಕುಂಬಾರ, ಸೇರಿದಂತೆ ಅನೇಕ ಮಹಿಳೆಯರು ಉಪಸ್ಥಿತರಿದ್ದರು. 


ಸುದ್ದಿ ಓದಿ