ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗಬೇಕು: ಶಾಸಕ ನಾರಾ ಭರತ್ ರೆಡ್ಡಿ
Nagendra should get a ministerial berth: MLA Nara Bharat Reddy
ಬಳ್ಳಾರಿ 27: ನಗರದಲ್ಲಿ ಹೊಸದಾಗಿ ಸಚಿವ ಸಂಪುಟ ಪುನರ್ರಚನೆಯಾದರೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂಬುದು ನನ್ನ ಹಾಗೂ ಜಿಲ್ಲೆಯ ಶಾಸಕರ ಅಭಿಪ್ರಾಯ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಬಳ್ಳಾರಿಯ ಮಹಾನಗರ ಪಾಲಿಕೆಯಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದರು.ಸಿಎಂ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಸಿಎಂ ಬದಲಾವಣೆ ಬಗ್ಗೆ ನನಗೆ ಮಾಹಿತಿಯಿಲ್ಲ, ಶಾಸಕಾಂಗ ಪಕ್ಷದ ಸಭೆಯ ಬಗ್ಗೆಯೂ ಕರೆ ಬಂದಿಲ್ಲ, ಆದರೆ ಸಿಎಂ ಬದಲಾವಣೆಗೆ ಸಂಬಂಧಿಸಿ ಹೈಕಮಾಂಡ್ ಸೂಚನೆಯಂತೆ ನಾನು ನಡೆದುಕೊಳ್ಳುತ್ತೇನೆ ಎಂದರು.
ಸಚಿವ ಸಂಪುಟ ಪುನರ್ರಚನೆ ಅಥವಾ ಸಿಎಂ ಬದಲಾವಣೆ ವಿಷಯದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರ ತೀರ್ಮಾನವೇ ಅಂತಿಮ, ಅವರು ಹೇಳಿದಂತೆ ನಾವು ನಡೆದುಕೊಳ್ಳುತ್ತೇವೆ ಎಂದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಯಾಜ್ ಅಹ್ಮದ್, ಸುಬ್ಬರಾಯುಡು, ಮೊಹಮ್ಮದ್ ಭಾಯ್, ಡಿ.ಸೂರಿ, ಬಿಆರೆಲ್ ಸೀನಾ, ಅಲ್ಲಾಬಕಷ್, ಹೊನ್ನಪ್ಪ, ಕಣೇಕಲ್ ಮೆಹಬೂಬಸಾಬ, ಪಾಲಿಕೆಯ ಸದಸ್ಯ ಜಬ್ಬಾರ್ ಮತ್ತಿತರರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 