ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ
Nalvadi Krishnaraja Wodeyar Jayanti Celebration
ಸವದತ್ತಿ 04 : ಆಧುನಿಕ ಮೈಸೂರಿನ ನಿರ್ಮಾತೃ, ದಾರ್ಶನಿಕ ಆಡಳಿತಗಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ಗುರುವಾರ ತಾಲೂಕು ಆಡಳಿತದ ವತಿಯಿಂದ ತಹಶೀಲ್ದಾರ್ ಕಚೇರಿಯಲ್ಲಿ ಭಕ್ತಿಪೂರ್ವಕವಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಶಿರಸ್ತೇದಾರ ಶಶಿರಾಜ ವನಕಿ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಪೂಜೆ ನೆರವೇರಿಸಿದರು ಬಳಿಕ ಮಾತನಾಡಿದ ಅವರು ಆಧುನಿಕ ಮೈಸೂರಿನ ಶಿಲ್ಪಿಯಾಗಿ ನಾಡನ್ನು ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಗಳು ಅಪಾರ. ಶಾಲೆ-ಕಾಲೇಜುಗಳ ಸ್ಥಾಪನೆ, ವಾಣಿವಿಲಾಸ ಸಾಗರ ಹಾಗೂ ಕೃಷ್ಣರಾಜ ಸಾಗರ (ಕೆಆರ್ಎಸ್) ಅಣೆಕಟ್ಟುಗಳ ನಿರ್ಮಾಣ, ಜಲವಿದ್ಯುತ್ ಕೇಂದ್ರಗಳು, ಆಸ್ಪತ್ರೆಗಳು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮೈಸೂರು ಬ್ಯಾಂಕ್ ಸ್ಥಾಪನೆ ಮಾಡುವ ಮೂಲಕ ಅವರು ರಾಜ್ಯದ ಸಮಗ್ರ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದರು, ಎಂದು ಸ್ಮರಿಸಿದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮೈಗೂಡಿಸಿಕೊಂಡಿದ್ದ ಮಹಾನ್ ಆಡಳಿತಗಾರರಾಗಿದ್ದ ಅವರು, ಶಿಕ್ಷಣ, ಕೈಗಾರಿಕೆ, ನೀರಾವರಿ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಗಾಗಿ ಕೈಗೊಂಡ ಕ್ರಾಂತಿಕಾರಿ ನಿರ್ಧಾರಗಳು ಇಂದಿಗೂ ನಮಗೆ ದಾರೀದೀಪವಾಗಿವೆ. ಅವರು ರಾಷ್ಟ್ರವೇ ಹೆಮ್ಮೆ ಪಡುವಂತಹ ಅನನ್ಯ ಸಾಧಕರು, ಎಂದು ಬಣ್ಣಿಸಿದರು.ಈ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರತ್ನಾ ಕದಂ, ಸಂಜೀವಕುಮಾರ, ಮಲೀಕ ಹಲೀಮನವರ, ಕಾರ್ತಿಕ ಹನಸಿ, ಪ್ರವೀಣ್, ಎ.ಎಸ್. ದೊಡವಾಡ, ವಿಜಯಲಕ್ಷ್ಮಿ ವಾಡಕರ್, ಎಸ್.ವಿ. ಉಪ್ಪಾರ, ಮೇನುಕಾ ಕಾತರಕಿ, ಎ.ಎಚ್. ಬ್ಯಾಹಟ್ಟಿ, ಎಮ್.ಎಮ್. ಮಾಹುತ್, ಪ್ರವೀಣ್ ನಾಂವಿ, ಸೇರಿದಂತೆ ತಾಲೂಕು ಆಡಳಿತದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 