ದಕ್ಷಿಣ ಭಾರತದ ನಾಲ್ವರು ಗಣ್ಯರ ರಾಜ್ಯ ಸಭೆಗೆ ನಾಮ ನಿರ್ದೇಶನ ಅಭಿನಂದನಾರ್ಹ
ಲೋಕದರ್ಶನ ವರದಿ
ಅಥಣಿ 07: ಶಿಕ್ಷಣ, ಧಾರ್ಮಿಕ, ಸಾಮಾಜಿಕ ರಂಗಗಳಲ್ಲಿ ಅಸಾಧಾರಣ ಸೇವೆ ಮಾಡುತ್ತಿರುವ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮವಿಭೂಷಣ ಡಾ.ವೀರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ವರು ಸಾಧಕ ಗಣ್ಯರನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ರಾಜ್ಯ ಸಭೆಗೆ ನಾಮ ನಿರ್ದೇಶನ ಮಾಡಿರುವುದು ಅಭಿನಂದನಾರ್ಹ ಎಂದು ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ರಾಜೇಶ ನೇರ್ಲಿ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಕ್ರೀಡಾ ಕ್ಷೇತ್ರದಲ್ಲಿ ಪದ್ಮಶ್ರೀ ಪುರಸ್ಕೃತೆ ಪಿ.ಟಿ.ಉಷಾ, ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಪದ್ಮ ವಿಭೂಷಣ ಪ್ರಶಸ್ತಿ ವಿಜೇತ ಇಳಯರಾಜಾ, ಸಿನೇಮಾ ನಿರ್ದೆಶಕರಾದ ಕೆ.ವಿ.ವಿಜಯೇಂದ್ರ ಪ್ರಸಾದ ಇವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿರುವುದು ಸಬ್ ಕಾ ಸಾಥ್, ಸಬ್ ಕಾ ವಿಕಾಸ ನ ಸ್ಪಷ್ಟ ನಿದರ್ಶನ ಇದಾಗಿದ್ದು, ಕೇಂದ್ರದ ಈ ನಿರ್ಧಾರ ಸಾಧಕರ ಅರ್ಹತೆಗೆ ಸಂದ ಪುರಸ್ಕಾರವಾಗಿದೆ ಎಂದಿದ್ದಾರೆ.