ಹಾವೇರಿ

ರಾಷ್ಟ್ರೀಯ ದತ್ತು ಮಾಸಾಚರಣೆ- ಸಹಿ ಸಂಗ್ರಹಣೆಗೆ ಚಾಲನೆ

ರಾಷ್ಟ್ರೀಯ ದತ್ತು ಮಾಸಾಚರಣೆ- ಸಹಿ ಸಂಗ್ರಹಣೆಗೆ ಚಾಲನೆ

ಲೋಕದರ್ಶನ ವರದಿ 

           ಹಾವೇರಿ:ನ.13 : ರಾಷ್ಟ್ರೀಯ ದತ್ತು ಮಾಸಾಚರಣೆ-ನವ್ಹೆಂಬರ್‌-2026 ಅಂಗವಾಗಿ  ಸಾರ್ವಜನಿಕರಿಗೆ ಅರಿವು ಮೂಡಿಸುವ ಸಹಿ ಸಂಗ್ರಹಣೆಗೆ ಇತ್ತೀಚೆಗೆ ಹಾವೇರಿ ನಗರದಲ್ಲಿ ಜರುಗಿದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಸಕ್ಕರೆ  ಮತ್ತು ಜವಳಿ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ರುದ್ರ​‍್ಪ  ಮಾನಪ್ಪ ಲಮಾಣಿ ಅವರು ಚಾಲನೆ ನೀಡಿದರು. 

ನವ್ಹೆಂಬರ್‌-2026ರ ಘೋಷವಾಖ್ಯ: ಪೋಷಕರಾಗಲು ಯಾವುದೇ ಅಡ್ಡ ದಾರಿಗಳಿಲ್ಲ-ಕಾನೂನು ಬದ್ಧ ದತ್ತು ಸ್ವೀಕಾರವೊಂದೇ ಸರಿಯಾದ ಮಾರ್ಗ” ಎಂಬ ಕುರಿತು ವ್ಯಾಪಕ ಪ್ರಚಾರದೊಂದಿಗೆ ಜಿಲ್ಲೆಯಲ್ಲಿ ರಾಷ್ಟ್ರೀಯ ದತ್ತು ಮಾಸಾಚರಣೆ ಆಚರಿಸಲಾಗುತ್ತಿದೆ. 

ಬ್ಯಾಡಗಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ಅವರು ಸಹಿ ಹಾಕಿದರು ಹಾಗೂ ಸೆಲ್ಪಿ ಸ್ಟ್ಯಾಂಡ್‌ನಲ್ಲಿ  ಭಾವಚಿತ್ರ ತೆಗೆದುಕೊಳ್ಳುವ ಮೂಲಕ  ಕಾನೂನು ಬದ್ಧ ದತ್ತು ಪ್ರಕ್ರಿಯೆ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಸಲಹೆ ನೀಡದರು. 

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ದತ್ತು ಮಾಸಾಚರಣೆ ಕುರಿತು ಪ್ರಚಾರ ಸಾಮಗ್ರಿಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.  

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಮೈದೂರ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ,  ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಲ್ಜಿತ್‌ಕುಮಾರ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್, ಉಪ ವಿಭಾಗಾಧಿಕಾರಿ ಕಲ್ಯಾಣಿ ಕಾಂಬ್ಳೆ, ತಹಶೀಲ್ದಾರ ಶ್ರೀಮತಿ ಶರಣಮ್ಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಇತರರು ಉಪಸ್ಥಿತರಿದ್ದರು. 


ಸುದ್ದಿ ಓದಿ