ರಾಷ್ಟ್ರೀಯ ಗ್ರಾಹಕರ ದಿನಾಚರಣೆ
ಮುಂಡಗೋಡ 24: ತಾಲೂಕಿನ ಹುನಗುಂದ ಗ್ರಾಮದ ವಿರಕ್ತಮಠದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಹಯೋಗದಲ್ಲಿ ಶನಿವಾರ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಕೀಲ ರಾಘವೇಂದ್ರ ಮಳಗಿಕರ ಕಾರ್ಯಕ್ರಮ ಉದ್ಘಾಟಿಸಿ ಗ್ರಾಹಕರ ಕಾನೂನು, ಪೋಕ್ಸೋ ಕಾಯ್ದೆ, ಮೋಟಾರ್ ವಾಹನ ಕಾಯ್ದೆ, ಜನನ-ಮರಣ ಕಾಯ್ದೆ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಗ್ರಾಮೀಣಾಭಿವೃದ್ಧಿ ಅಧಿಕಾರಿ ಮಹಾಬಲೇಶ್ವರ ನಾಯ್ಕ ಸಂಸ್ಥೆಯ ಸೌಲಭ್ಯಗಳ ಕುರಿತು ವಿವರಿಸಿದರು. ಈ ಸಂದರ್ಭದಲ್ಲಿ ನಾಗರಾಜ ಬಾರ್ಕಿ, ಕೆ.ಎಸ್.ಗುಲ್ಯಾನವರ, ಎಮ್.ಎಸ್.ರೇವಣಕರ, ಈರ್ಪ ಹಿರೇಮಠ, ನಾಗಮ್ಮ ರಾಣಿಬೆನ್ನೂರು ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಗುಮಾಸ್ತ ಶರತ ಪವಾರ, ಹನುಮಂತಪ್ಪ ಹಾಗೂ ಮುಂತಾದವರು ಉಪಸ್ಥಿತರಿದ್ದರು.