ರಾಷ್ಟ್ರ ಮಟ್ಟದ ಮುಂದುವರೆದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ
National Continuing Medical Education Program
ವಿಜಯಪುರ 02: ಗುಣಮಟ್ಟದ ಅತ್ಯಾಧುನಿಕ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಹೇಳಿ ಮಾಡಿಸಿದಂತಿದೆ ಎಂದು ಬೆಂಗಳೂರು ನಿಮ್ಹಾನ್ಸ್ ನ ಡಿ-ಎಡಿಕ್ಷನ್ ಸೆಂಟರ್ ಮುಖ್ಯಸ್ಥ ಮತ್ತು ಸೈಕ್ಯಾಟ್ರಿಕ್ ವಿಭಾಗದ ಮಾಜಿ ಮುಖ್ಯಸ್ಥ ಡಾ. ವಿವೇಕ ಬೆನೆಗಲ ಹೇಳಿದ್ದಾರೆ.ಇಂದು ಸೋಮವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಆಯೋಜಿಸಲಾದ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ರಾಷ್ಟ್ರ ಮಟ್ಟದ ಮುಂದುವರೆದ ವೈದ್ಯಕೀಯ ಶಿಕ್ಷಣ(ಸಿಎಂಇ) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಪ್ರಶಾಂತ ವಾತಾವರಣ, ಕಲಿಕಗೆ ಅಗತ್ಯವಾಗಿರುವ ಸೌಲಭ್ಯಗಳು ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಮತ್ತು ಓದಿನ ಮೇಲೆ ಪರಿಣಾಮ ಬೀರುತ್ತವೆ.
ಬಿ.ಎಲ್.ಡಿ.ಇ ವೈದ್ಯಕೀಯ ಕಾಲೇಜಿನ ಶೈಕ್ಷಣಿಕ ಪರಿಸರ ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡಲು ಹೇಳಿ ಮಾಡಿಸಿದಂತಿದೆ. ಇಲ್ಲಿಯ ಕಲಿಕಾ ಸೌಲಭ್ಯಗಳು ಇತರ ಕಾಲೇಜುಗಳಿಗೆ ಮಾದರಿಯಾಗಿದೆ. ನಾನೂ ಕೂಡ ಮತ್ತೋಮ್ಮೆ ಇಲ್ಲಿಯ ಕಾಲೇಜಿನಲ್ಲಿ ಓದಬೇಕು ಎನಿಸುತ್ತಿದೆ ಎಂದು ಅವರು ಹೇಳಿದರು.ಡಾ. ಆರ್. ಸಿ. ಬಿದರಿ ಮಾತನಾಡಿ, ತಮ್ಮ ತಂದೆ ದಿ. ಡಾ. ಸಿ. ಆರ್. ಬಿದರಿ ಅವರು ರೋಗಿಗಳನ್ನು ತಮ್ಮ ಕುಟುಂಬ ಸದಸ್ಯರಂತೆ ಕಾಣುತ್ತಿದ್ದರು. ಪ್ರೀತಿ, ಕರುಣೆ, ಕಾಳಜಿ ಮತ್ತು ಆತ್ಮೀಯತೆಯಿಂದ ಚಿಕಿತ್ಸೆ ನೀಡುತ್ತಿದ್ದರು. ಅವರು ಹಾಕಿಕೊಟ್ಟಿರುವ ಮಾರ್ಗದಲ್ಲಿ ನಾವೆಲ್ಲ ಕುಟುಂಬ ಸದಸ್ಯರು ಮುನ್ನಡೆಯುತ್ತಿದ್ದೇವೆ ಎಂದು ಹೇಳಿದರು.ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಮಾತನಾಡಿ, ಪ್ರಾಥಃಸ್ಮರಣೀಯರ ಕಾಯಕದ ಫಲವಾಗಿ ಬಿ.ಎಲ್.ಡಿ.ಇ ಸಂಸ್ಥೆ ಇಂದು ನರ್ಸರಿಯಿಂದ ಸ್ನಾತಕೋತ್ತರ ವರೆಗೆ ಶಿಕ್ಷಣ ನೀಡುತ್ತಿದೆ. ಡೀಮ್ಡ್ ವಿವಿ ದೇಶದ ಮುಂಚೂಣಿ ವಿವಿಗಳಲ್ಲಿ ಒಂದಾಗಿದೆ. ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆಗಳಿಂದ ರಾಷ್ಟ್ರ ಮಟ್ಡದಲ್ಲಿ ಉನ್ನತ ಸ್ಥಾನದಲ್ಲಿದೆ.
ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಮತ್ತು ಸಮಕುಲಾಧಿಪತಿ ಬಿ. ಎಂ. ಪಾಟೀಲ ಅವರ ಸಮರ್ಥ ಆಡಳಿತದಲ್ಲಿ ಡೀಮ್ಡ್ ವಿವಿ ಸಾಧನೆಗಳ ಮೂಲಕ ಹೆಸರು ಮಾಡುತ್ತಿದೆ. ಅಧುನಿಕ ತಂತ್ರಜ್ಞಾನವನ್ನು ಸದ್ಬಳಕೆ ಮಾಡುವ ಮೂಲಕ ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಣಮಟ್ಡದ ಶಿಕ್ಷಣ ನೀಡುತ್ತಿದೆ ಎಂದು ಹೇಳಿದರು.ಕುಲಪತಿ ಡಾ. ಅರುಣ ಚಂ. ಇನಾಮದಾರ ಮಾತನಾಡಿ, 1991ರಲ್ಲಿ ನಾನು ಡಾ. ಸಿ. ಆರ್. ಬಿದರಿ ಅವರ ಮಾರ್ಗದರ್ಶನದಲ್ಲಿ ಸೇವೆಗೆ ಸೇರಿದ್ದೆ. ಚಿಕ್ಕಮಕ್ಕಳ ತಜ್ಞರಾಗಿದ್ದ ಅವರು ಚರ್ಮರೋಗ ವೈದ್ಯರೂ ಆಗಿದ್ದರು. ಅವರ ತಮ್ಮ ಪ್ರತಿಯೊಬ್ಬ ವಿದ್ಯಾರ್ಥಿಗಳ ಬಗ್ಗೆ ಅಪಾರ ಕಾಳಜಿ ವಹಿಸುತ್ತಿದ್ದರು. ವ್ಯಸನ ಮತ್ತು ಗೀಳು ಮನುಷ್ಯನ ಮಾನಸಿಕ ಸಮಸ್ಯೆಯಾಗಿದ್ದು, ನಾನಾ ಗೀಳುಗಳಿಗೆ ಅದರಲ್ಲೂ ಡಿಜಿಟಲ್ ಮಾಧ್ಯಮ ಗೀಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ.
ಗೀಳಿಗೆ ಕಾರಣ, ಪರಿಣಾಮ, ಪರಿಹಾರ, ಮುನ್ನೆಚ್ಚರಿಕೆಯ ಕುರಿತು ಹೆಚ್ಚೆಚ್ಚು ಚರ್ಚೆ ನಡೆಯಬೇಕಿದೆ. ವ್ಯಸನ ಮತ್ತು ಗೀಳಿನ ದುಷ್ಪರಿಣಾಮಗಳ ಕುರಿತು ಮಕ್ಕಳಿಗೆ ಬಾಲ್ಯದಿಂದಲೇ ಶಿಕ್ಷಣ ನೀಡುವುದು ಅಗತ್ಯವಾಗಿದೆ ಎಂದು ಹೇಳಿದರು.ಇದೇ ವೇಳೆ ಡಾ. ವಿವೇಕ ಬೆನಗಲ ಸೇರಿದಂತೆ ನಾನಾ ವೈದ್ಯರನ್ನು ಡಾ. ಸಿ. ಆರ್. ಬಿದರಿ ಕುಟುಂಬದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಆಶಾ ಎಂ. ಪಾಟೀಲ, ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಡಾ. ಬಾಬುರಾಜೇಂದ್ರ ನಾಯಕ, ಡಾ. ಎಸ್. ಎನ್. ಬೆಂಟೂರ, ಡಾ. ವಿಜಯಕುಮಾರ ವಾರದ, ಡಾ. ರವಿ ಬಿರಾದಾರ, ಡಾ. ಶೈಲಜಾ ಬಿರಾದಾರ, ಡಾ. ಅನುಜಾ ಎಂ. ಕೆ, ವಿಜಯೇಂದ್ರ ಬಿದರಿ, ಡಾ. ಸಿದ್ದು ಬಿರಾದಾರ, ಡಾ. ರಾಜೇಶ ಹೊನ್ನುಟಗಿ ಮುಂತಾದವರು ಉಪಸ್ಥಿತರಿದ್ದರು.
ಪ್ರಾಚಾರ್ಯೆ ಡಾ. ತೇಜಶ್ವಿನಿ ವಲ್ಲಭ ಸ್ವಾಗತಿಸಿದರು. ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ ವಂದಿಸಿದರು. ಡಾ. ಅರ್ಿತ ಮತ್ತು ಡಾ. ಪ್ರತೀಕ್ಷಾ ನಿರೂಪಿಸಿದರು. ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಆಯೋಜಿಸಲಾದ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ ರಾಷ್ಟ್ರ ಮಟ್ಟದ ಮುಂದುವರೆದ ವೈದ್ಯಕೀಯ ಶಿಕ್ಷಣ(ಸಿಎಂಇ) ಕಾರ್ಯಕ್ರಮವನ್ನು ಬೆಂಗಳೂರು ನಿಮ್ಹಾನ್ಸ್ ಡಿ-ಎಡಿಕ್ಷನ್ ಸೆಂಟರ್ ಮುಖ್ಯಸ್ಥ ಮತ್ತು ಸೈಕ್ಯಾಟ್ರಿಕ್ ವಿಭಾಗದ ಮಾಜಿ ಮುಖ್ಯಸ್ಥ ಡಾ. ವಿವೇಕ ಬೆನೆಗಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ. ಆರ್. ಸಿ. ಬಿದರಿ, ಆಶಾ ಎಂ. ಪಾಟೀಲ, ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಅರುಣ ಚಂ. ಇನಾಮದಾರ, ಡಾ. ಬಾಬುರಾಜೇಂದ್ರ ನಾಯಕ, ಡಾ. ಎಸ್. ಎನ್. ಬೆಂಟೂರ, ಡಾ. ವಿಜಯಕುಮಾರ ವಾರದ, ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ಮುಂತಾದವರು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 