ಬೆಳಗಾವಿ

ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ

ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆ

ಲೋಕದರ್ಶನ ವರದಿ 

          ಬೆಳಗಾವಿ  12: ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ದಿನಾಂಕ 11-11-2026 ರಂದು ಹಿಂದುಳಿದ ವರ್ಗ/ಅಲ್ಪಸಂಖ್ಯಾತರ ಘಟಕ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಘಟಕ ಹಾಗೂ ಶಿಕ್ಷಣಶಾಸ್ತ್ರ ವಿಭಾಗದ ವತಿಯಿಂದ ಭಾರತದ ಮೊದಲ ಶಿಕ್ಷಣ ಸಚಿವರಾದ ಡಾ. ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ಆಚರಿಸಲಾಯಿತು.  

             ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ. ಎಂ. ತ್ಯಾಗರಾಜ ಅವರು ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗದೆ, ಪ್ರಾಯೋಗಿಕ ಜ್ಞಾನ, ವಿಮರ್ಶಾತ್ಮಕ ಚಿಂತನೆ ಹಾಗೂ ನವೀನ ಕೌಶಲ್ಯಗಳನ್ನು ಬೆಳೆಸಿಕೊಂಡು ಸ್ವಾವಲಂಬಿಗಳಾಗಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ವಿಶ್ವವಿದ್ಯಾಲಯವು ಇ-ವಿದ್ಯಾ ಹಾಗೂ ಇ-ಸ್ಪರ್ಧಾ ಪೋರ್ಟಲ್‌ಗಳ ಮೂಲಕ ತರಬೇತಿ ನೀಡುತ್ತಿದೆ. ವಿದ್ಯಾರ್ಥಿಗಳು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.  

             ಗೌರವ ಉಪಸ್ಥಿತರಿದ್ದ ವಿಶ್ವವಿದ್ಯಾಲಯದ ನೂತನ ಕುಲಸಚಿವ ಹಾಗೂ ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ ಶ್ರೀ ಶ್ರವಣ ನಾಯ್ಕ ಮಾತನಾಡಿ, ಶಿಕ್ಷಣವು ಕೇವಲ ಜ್ಞಾನಾರ್ಜನೆಯ ಸಾಧನವಲ್ಲ; ಅದು ಜೀವನದ ಗುರಿ, ನಿರ್ಧಾರ ಮತ್ತು ಪರಿವರ್ತನೆಯ ಮಾರ್ಗವಾಗಬೇಕು ಎಂದರು. ವಿದ್ಯಾರ್ಥಿಗಳು ಜ್ಞಾನವಂತರಾಗುವುದರ ಜೊತೆಗೆ ಪ್ರಜ್ಞಾವಂತರಾಗಬೇಕು. ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ (ಂಋ) ವೇಗವಾಗಿ ಬೆಳೆಯುತ್ತಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಓದುವ ಹವ್ಯಾಸ ಬೆಳೆಸಿಕೊಂಡು ಪ್ರತಿದಿನ ಕನಿಷ್ಠ ಐದು ಪುಟಗಳನ್ನಾದರೂ ಓದಬೇಕು ಎಂದು ಸಲಹೆ ನೀಡಿದರು.  


ಸುದ್ದಿ ಓದಿ