ಮಿಲ್ಲತ್ ಶಾಲೆಯಲ್ಲಿ ಮೌಲಾನ ಆಜಾದ್ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಶಿಕ್ಷಣ ದಿನಾಚರಣೆ
ಕೊಪ್ಪಳ 11 ; ನಗರದ ಬಹದ್ದೂರ್ ಬಂಡಿ ರಸ್ತೆ ನಿರ್ಮಿತಿ ಕೇಂದ್ರದ ಬಡಾವಣೆಯಲ್ಲಿರುವ ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಮಿಲ್ಲತ್ ಪಬ್ಲಿಕ್ ಸ್ಕೂಲ್ ಸಭಾಭವನದಲ್ಲಿ ಬುಧವಾರದಂದು ದೇಶದ ್ರ್ರಥಮ ಕೇಂದ್ರ ಶಿಕ್ಷಣ ಮಂತ್ರಿ ಯಾಗಿದ್ದ ಮೌಲಾನ ಅಬುಲ್ ಕಲಾಂ ಆಜಾದ್ ರವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ಆಚರಿಸಲಾಯಿತು,
ಕಾರ್ಯಕ್ರಮದಲ್ಲಿ ಮೌಲಾನ ಆಜಾದ್ ರವರ ಭಾವಚಿತ್ರಕ್ಕೆ ಮಾಲಾರೆ್ಣ ಮಾಡಿ ಗೌರವ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಸ್ಥೆಯ ಅಧ್ಯಕ್ಷ ಸೈಯದ್ ಗೌಸ ಪಾಶಾ ಖಾಜಿ ರವರು ಮಾತನಾಡಿ ಮೌಲಾನಾ ಆಜಾದ್ ರವರು ನಮ್ಮ ದೇಶ ಕಂಡ ಮಹಾನ್ ನಾಯಕರಾಗಿದ್ದು ದೇಶಕ್ಕಾಗಿ ಅವರ ಕೊಡುಗೆ ಅಪಾರವಾಗಿದೆ ಅವರ ಆದರ್ಶವನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಪಾಲಿಸಬೇಕು ಹಾಗೂ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಮ್ಮ ನಮ್ಮ ಬದುಕು ಕಟ್ಟಿಕೊಳ್ಳಬೇಕು ಎಂದರು, ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಮೊಹಮ್ಮದ್ ಅಜೀಜ ರೆವಡಿ ಸಹ ಶಿಕ್ಷಕರುಗಳಾದ ನಾಜಿಯಾಬೇಗಂ ಫರ್ಹಿನ್ ಬೇಗಂ, ಹಪ್ಷ ,ಸಾನಿಯಾ ಮತ್ತು ನಗಮಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು,