ಶಿಕ್ಷಣವನ್ನು ಸಮಗ್ರವಾಗಿಸಲು ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿ
ಮಹಾಲಿಂಗಪುರ23: ಕಲಿಕೆಯ ಚಿತ್ರಣವನ್ನೇ ಬದಲಾಯಿಸಲು, ಶಿಕ್ಷಣವನ್ನು ಸಮಗ್ರವಾಗಿಸಿ ಸ್ವಾವಲಂಬಿ ಭಾರತ ಕಟ್ಟಲು ಗಟ್ಟಿ ಅಡಿಪಾಯ ಹಾಕಲು ರಾಷ್ಟ್ರೀಯ ಶಿಕ್ಷಣ ನೀತಿ-2020 ಮಾರ್ಗದರ್ಶಿ ತತ್ವವಾಗಿದೆ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ.ಎಸ್.ಟಿ.ಬಾಗಲಕೋಟಿ ಹೇಳಿದರು.
ಸ್ಥಳೀಯ ಕೆಎಲ್ಇ ಸಂಸ್ಥೆಯ ಎಸ್ಸಿಪಿ ಕಲಾ, ವಿಜ್ಞಾನ ಹಾಗೂ ಡಿಡಿಎಸ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಅಧೀನದಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ-2020 ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದರು.
ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿಗಳಲ್ಲಿ ಕೌಶಲ್ಯ, ಜ್ಞಾನದ ಅಭಿವೃದ್ಧಿಗೆ ಸಹಾಯಕಾರಿಯಾಗಿದೆ ಎಂದರು.
ಡಾ.ಎಸ್.ಟಿ.ಬಾಗಲಕೋಟಿ ವಿದ್ಯಾರ್ಥಿಗಳಲ್ಲಿ ಮತ್ತು ಪಾಲಕರಲ್ಲಿ ಇದ್ದ ಹಲವಾರು ಗೊಂದಲಗಳಿಗೆ ಉತ್ತರಿಸಿದರು.
ಕಾಲೇಜಿನ ಪ್ರಾಚಾರ್ಯ ಡಾ.ಬಿ.ಎಂ.ಪಾಟೀಲ, ಐಕ್ಯೂಎಸಿ ಸಂಯೋಜಕ ಡಾ.ಕೆ.ಎಂ.ಅವರಾದಿ, ಎನ್ಇಪಿ ನೋಡಲ್ ಅಧಿಕಾರಿ ಡಾ.ಅಶೋಕ ನರೋಡೆ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಸುನಂದಾ ಸೋರಗಾಂವಿ ಹಲವರು ಇದ್ದರು.