ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ
ಯರಗಟ್ಟಿ: ತಾಲೂಕಿನ ಸೊಪಡ್ಲಾ ಗ್ರಾಮದ ಮಹಾಂತೇಶ ಎಜುಕೇಶನ್ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಆಯ್ ಆರ್ ಗಂಜಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯೋಪಾಧ್ಯಾಯರಾದ ಹೆಚ್ ವಾಯ್ ಸುಳ್ಳದ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಸದರಿ ಕಾರ್ಯಕ್ರಮದಲ್ಲಿ ಶಾಲಾ ಸಹ ಶಿಕ್ಷಕ ಎಂ ಎಸ್ ಅಳಗೋಡಿ, ಹೆಚ್ ಎಂ ಕಾಶನ್ನವರ, ಆಶಾ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.