2028ರೊಳಗೆ ರಾಷ್ಟ್ರೀಯ ಹೆದ್ದಾರಿ ಪೂರ್ಣ:ಪ್ರಿಯಾಂಕಾ ಜಾರಕಿಹೊಳಿ
National Highway to be completed by 2028: Priyanka Jarkiholi
ಅಥಣಿ 07 :- ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರಾಷ್ಟೀಯ ಹೆದ್ದಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಸೂಚನೆ ನೀಡಿದರು.ಅವರು ಕಾಗವಾಡ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನವಲಿಹಾಳ ಗ್ರಾಮದ ಹತ್ತಿರ ನಿರ್ಮಾಣ ಹಂತದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಅಧಿಕಾರಿಗಳ ತಂಡದೊಂದಿಗೆ ವೀಕ್ಷಿಸಿ ಮಾತನಾಡಿದರು.ಮುರಗುಂಡಿಯಿಂದ ಗೋಟುರವರೆಗಿನ ಕಾಮಗಾರಿಯಲ್ಲಿ ಅನೇಕ ತಾಂತ್ರಿಕ ಅಡಚನೆಗಳು ಉಂಟಾಗಿರುವದರಿಂದ ಕಾಮಗಾರಿಯಲ್ಲಿ ವಿಳಂಬವಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾಗುತ್ತಿದ್ದು, ತಕ್ಷಣ ಈ ಆಡಚಣೆಗಳನ್ನು ಬಗೆಹರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕೆಂದು ಅಧಿಕಾರಿಗಳಿಗೆ ಆದೇಶಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ನೀಡುವುದರ ಜೊತೆಗೆ ಅತಿ ಹೆಚ್ಚು ಉತ್ತಮ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆವೆ ಎಂದರು. ಇಂದು ಉಗಾರ,ಮುರಗುಂಡಿ.ಬಡಚಿ ಗ್ರಾಮಗಳಲ್ಲಿ 5 ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ವೇಳೆ ಕ್ಷೇತ್ರರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿವೇಕ ಮಠ, ಶಿಕ್ಷಣಾಧಿಕಾರಿ ಎಂ. ಆರ್. ಮುಂಜೆ, ಕಾಂಗ್ರೆಸ್ ಧುರಿಣರಾದ ರಮೇಶ್ ಸಿಂದಗಿ, ಗಜಾನನ ಮಂಗಸೂಳಿ, ರಾವಸಾಹೇಬ್ ಐಹೊಳೆ, ಸುನಿತಾ ಐಹೊಳೆ, ರೇಖಾ ಪಾಟೀಲ , ಗುತ್ತಿಗೆದಾರರಾದ ಚಿದಾನಂದ ಹಣಮಾಪೂರ, ಈಶ್ವರ ಸನದಿ, ಸೇರಿದಂತೆ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 