ಶಾಂತೇಶ್ವರ ಕಾಲೇಜಿನಲ್ಲಿ ರಾಷ್ಟ್ರೀಯ ಹಿಂದಿ ದಿವಸ ಆಚರಣೆ
National Hindi Day celebrated at Shanteshwar College
ಶಾಂತೇಶ್ವರ ಕಾಲೇಜಿನಲ್ಲಿ ರಾಷ್ಟ್ರೀಯ ಹಿಂದಿ ದಿವಸ ಆಚರಣೆ
ಇಂಡಿ 15: ಹಿಂದಿ ದಿವಸ ಎಂದು ಜನಪ್ರೀಯವಾಗಿ ಕರೆಯಲ್ಪಡುವ ರಾಷ್ಟ್ರೀಯ ಹಿಂದಿ ದಿನವು ಭಾರತದಾದ್ಯಂತ ಸೆಪ್ಟೆಂಬರ್ 14 ರಂದು ನಡೆಯುವ ವಾರ್ಷಿಕ ಆಚರಣೆಯಾಗಿದೆ. ಹಿಂದಿ ಭಾಷೆಯನ್ನು ಗೌರವಿಸುವ ಮತ್ತು ಉತ್ತೇಜಿಸುವ ನಿಣಾ9ಯಕ ದಿನವೆಂದು ಗುರುತಿಸಲ್ಪಟ್ಟ ಈ ರಾಷ್ಟ್ರೀಯ ಕಾರ್ಯಕ್ರಮವು 1949ರಲ್ಲಿ ಭಾರತದ ಅಧಿಕೃತ ಭಾಷೆಗಳಲ್ಲಿ ಒಂದಾಗಿ ಹಿಂದಿಯನ್ನು ಐತಿಹಾಸಿಕವಾಗಿ ಅಳವಡಿಸಿಕೊಂಡಿದ್ದನ್ನು ಸ್ಮರಿಸುತ್ತದೆ ಎಂದು ವಿಜಯಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕಿ ಡಾ. ಮಹಾದೇವಿ ಸುಂಗಾರೆ ಹೇಳಿದರು.
ಪಟ್ಟಣದ ಶಾಂತೇಶ್ವರ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ "ರಾಷ್ಟ್ರೀಯ ಹಿಂದಿ ದಿವಸ" ಹಾಗೂ ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ ಕುರಿತಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಉಪನ್ಯಾಸಕರಾಗಿ ಆಗಮಿಸಿದ ಭಾರತ ಸೇವಾದಳದ ವಲಯ ಸಂಘಟಕ ನಾಗೇಶ ಡೋಣೂರ ಅವರು ರಾಷ್ಟ್ರೀಯ ಭಾವೈಕ್ಯತೆ,ನೈತಿಕ ಮೌಲ್ಯಗಳು ಹಾಗೂ ರಾಷ್ಟ್ರಧ್ವಜದ ಕುರಿತು ಮಾಹಿತಿ ನೀಡಿದರು.
ಶಾಂತೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ನೀಲಕಂಠಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲರಾದ ಆರ್ ಎಸ್ ಬಿರಾದಾರ, ಉಪನ್ಯಾಸಕರಾದ ಆರಿ್ಜ, ಪೂಜಾರಿ, ಫರಾಹರಬ್ಬಾನಿ ಮನಗೂಳಿ, ನಿವೃತ್ತ ಪ್ರಾಂಶುಪಾಲ ಎ,ಬಿ,ಪಾಟೀಲ್, ಎಸ್,ಆರ್,ಪ,ಪೂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಮಹೇಶ್ ಮೇಡೆಗಾರ, ಇನ್ನೂ ಹಲವರು ಉಪಸ್ಥಿತರಿದ್ದರು. ಹಿಂದಿ ಉಪನ್ಯಾಸಕ ಹಾಗೂ ಭಾರತ ಸೇವಾದಳ ಘಟಕದ ಮೇಲ್ವಿಚಾರಕ ವಿಜಯಕುಮಾರ್ ರಾಠೋಡ ಸ್ವಾಗತಿಸಿದರು. ವಿದ್ಯಾರ್ಥಿನಿ ಐಶ್ವರ್ಯ ಹಿರೇಕುರುಬರ ನಿರೂಪಿಸಿದರು. ಹಿರಿಯ ಉಪನ್ಯಾಸಕ ಎಸ್.ಬಿ.ಹಡಪದ ವಂದಿಸಿದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 