ಬಳ್ಳಾರಿಯಲ್ಲಿ ಡಿ. 12ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜನೆ: ವ್ಯಾಜ್ಯಗಳ ಇತ್ಯರ್ಥಕ್ಕೆ ಸಾರ್ವಜನಿಕರಿಗೆ ಕರೆ
ಬಳ್ಳಾರಿ,ನ.06 : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಳ್ಳಾರಿ ಇವರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 12 ರಂದು ಜಿಲ್ಲಾ ನ್ಯಾಯಾಲಯ ಒಳಗೊಂಡಂತೆ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ.
ಈ ಅದಾಲತ್ ನಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳು, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಬ್ಯಾಂಕ್ ಸಂಬಂಧಿತ ವ್ಯಾಜ್ಯಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಸಮಸ್ಯೆಗಳು, ಸಿವಿಲ್ ವ್ಯಾಜ್ಯಗಳು ಸೇರಿದಂತೆ ಕಾನೂನಿನಡಿ ಇತ್ಯರ್ಥಪಡಿಸಬಹುದಾದ ವಿವಿಧ ಪ್ರಕರಣಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.ಬಳ್ಳಾರಿ ಜಿಲ್ಲೆಯ ಒಟ್ಟು 18 ನ್ಯಾಯಾಲಯಗಳಲ್ಲಿ ಈ ಅದಾಲತ್ ನಡೆಯಲಿದ್ದು, ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಈಗಾಗಲೇ ಈ ಎಲ್ಲಾ ನ್ಯಾಯಾಲಯಗಳಲ್ಲಿ ಪ್ರತಿದಿನ ಪೂರ್ವಭಾವಿ ಬೈಠಕ್ ಗಳು ನಡೆಯುತ್ತಿವೆ.ಹೆಚ್ಚಿನ ವಿವರಗಳಿಗಾಗಿ ಸಾರ್ವಜನಿಕರು ಬಳ್ಳಾರಿಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಕಚೇರಿಯನ್ನು ಸಂಪರ್ಕಿಸಬಹುದುಸಾರ್ವಜನಿಕರು ಹಾಗೂ ಕಕ್ಷಿದಾರರು ಈ ಪೂರ್ವಭಾವಿ ಸಭೆಗಳ ಪ್ರಯೋಜನ ಪಡೆದುಕೊಂಡು ತಮ್ಮ ವಿವಾದಗಳನ್ನು ಸೌಹಾರ್ದಯುತವಾಗಿ ಅಂತ್ಯಗೊಳಿಸಿಕೊಳ್ಳುವಂತೆ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿದ್ದಲಿಂಗ ಪ್ರಭು ಅವರು ತಿಳಿಸಿದ್ದಾರೆ.