ಕಾರವಾರ

ರಾಷ್ಟ್ರೀಯ ಪೋಷಣ ಅಭಿಯಾನಕ್ಕೆ ಜಿಲ್ಲಾಧಿಕಾರಿ ಮುಗಿಲನ್‍ರಿಂದ ಚಾಲನೆ

ರಾಷ್ಟ್ರೀಯ ಪೋಷಣ ಅಭಿಯಾನಕ್ಕೆ ಜಿಲ್ಲಾಧಿಕಾರಿ ಮುಗಿಲನ್‍ರಿಂದ ಚಾಲನೆ

ಕಾರವಾರ 26:  ರಾಷ್ಟ್ರೀಯ ಪೋಷಣ ಅಭಿಯಾನಕ್ಕೆ ಜಿಲ್ಲಾಧಿಕಾರಿ ಮುಗಿಲನ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಕಾರವಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಸಭೆ ಕಾರವಾರ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ರಾಷ್ಟ್ರೀಯ ಪೋಷಣ ಅಭಿಯಾನ ಯೋಜನೆ ಅಡಿಯಲ್ಲಿ ಹಮ್ಮಿಕೊಳ್ಳಲಾದ ಪೋಷಣ ಪಕ್ವಾಡ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಹೊರಾಂಗಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಪದ್ಮಾವತಿ, ಇಲಾಖೆಯ ಇತರ ಅಧಿಕಾರಿಗಳು, ಸಿಡಿಪಿಓಗಳು  ಉಪಸ್ಥಿತರಿದ್ದರು.

ಸುದ್ದಿ ಓದಿ