ರಾಷ್ಟ್ರೀಯ ಪಲ್ಸ್ ಪೋಲಿಯೊ ಮೊದಲ ಸುತ್ತಿನ ಲಸಿಕಾ ಕಾರ್ಯಕ್ರಮ
National Pulse Polio First Round Vaccination Program
ಯರಗಟ್ಟಿ, 21 : ‘ದೇಶ ಸದೃಢವಾಗಲು ಪ್ರತಿಯೊಂದು ಮಗುವಿಗೆ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಪೋಲಿಯೊ ನಿರ್ಮೂಲನೆಗೆ ಶ್ರಮಿಸಬೇಕು’ ಎಂದು ಬೆಳಗಾವಿ ವಿಭಾಗದ ಪ್ರಾದೇಶೀಕ ಆಯುಕ್ತರಾದ ಜಾನಕಿ ಕೆ. ಎಂ. ತಿಳಿಸಿದರು.
ಪಟ್ಟಣ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಭಾನುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಹಾಗೂ ತಾಲೂಕಾ ಆಸ್ಪತ್ರೆ ಸವದತ್ತಿ/ಯರಗಟ್ಟಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಮೊದಲ ಸುತ್ತಿನ ಲಸಿಕಾ ಕಾರ್ಯಕ್ರಮದಲ್ಲಿ ಮಗುವಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
‘ಐದು ವರ್ಷದೊಳಗಿರುವ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಮುಂದೆ ಮಕ್ಕಳು ಯಾವುದೇ ರೀತಿಯ ಅಂಗವೈಕಲ್ಯಕ್ಕೆ ಒಳಗಾಗದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ತಾಲೂಕಾ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿ ತಾಲೂಕಿನಲ್ಲಿ ಪರಿಣಾಮಕಾರಿ ಯಾಗಿ ಕೆಲಸ ನಿರ್ವಹಿಸಿರುವುದು ಶ್ಲಾಘನೀಯ’ ಎಂದರು.
ತಹಶೀಲ್ದಾರ್ ಎಮ್. ವ್ಹಿ. ಗುಂಡಪ್ಪಗೋಳ, ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಡಾ. ರಾಜಶೇಖರ ಯರರ್ಝವಿ, ಡಾ. ಕೋಮಲ ಕರ್ಣಿ, ಡಾ. ವಿಜಯ ಬೆನಕಟ್ಟಿ, ಡಾ. ಅನಸೂಯಾ ಕಿವಡಸನ್ನವರ, ಡಾ. ಸಚೀನ ಉಪ್ಪಿನ, ಡಾ. ರಮಾಶ್ರೀ ಕಣಗಲಿ ಮತ್ತು ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಬಾಸ್ಕರ ಹಿರೇಮೆತ್ರಿ, ಉಮೇಶ ಮಾಗುಂಡನವರ, ಪ. ಪಂ. ಸದಸ್ಯ ಸಲೀಂಬೇಗ ಜಮಾದಾರ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 