ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ
National Pulse Polio Program launched
ಕಾರವಾರ, ಡಿ.21: ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಭಾನುವಾರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ ಕೆ. ಸೈಲ್ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ 5 ವರ್ಷದೊಳಗಿನ 1,04,581 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಜಿಲ್ಲೆಯಾದ್ಯಂತ 878 ಬೂತ್ಗಳನ್ನು ತೆರೆಯಲಾಗಿದೆ. 33 ಟ್ರಾನ್ಸಿಸ್ಟ್ ತಂಡ, 9 ಸಂಚಾರಿ ಲಸಿಕಾ ತಂಡಗಳ ವ್ಯವಸ್ಥೆ ಮಾಡಲಾಗಿದೆ. 3591 ಲಸಿಕೆ ಹಾಕುವವರು ಹಾಗೂ 200 ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದರು.
ಭಾರತ ದೇಶ ಪೋಲಿಯೋ ಮುಕ್ತವಾಗಿದ್ದು, ಆದರೂ ಸಹ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಮುನ್ನೆಚ್ಚರಿಕೆವಾಗಿ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸುವಂತೆ ಹಾಗೂ ಪೋಲಿಯೋ ಅಭಿಯಾನಕ್ಕೆ ಎಲ್ಲರ ಸಹಕಾರ ನೀಡಬೇಕು ಎಂದರು.
ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ ಮಾತನಾಡಿ, 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆಯನ್ನು ಹಾಕಿಸುವುದು ಪೋಷಕರ ಕರ್ತವ್ಯವಾಗಿದೆ ಎಂದರು.
ಜಿಲ್ಲಾ ಪಂಚಾಯತ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಡಾ.ದೀಲೀಷ್ ಶಶಿ ಮಾತನಾಡಿ ಪಲ್ಸ್ ಪೋಲಿಯೋ ಅಭಿಯಾನ ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಈ ಅಭಿಯಾನಕ್ಕೆ ಸಮುದಾಯದ ಸಹಭಾಗಿತ್ವ ಮುಖ್ಯವಾಗಿದೆ ಹಾಗಾಗಿ ಎಲ್ಲರ ಸಹಕಾರ ಅಗತ್ಯ ಎಂದರು.
ಕಾರ್ಯಕ್ರಮದಲ್ಲಿ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕಿ ಡಾ.ಪೂರ್ಣಿಮಾ, ವೈದ್ಯಕೀಯ ಅಧೀಕ್ಷಕ ಡಾ.ನರೇಶ ಪಾವಸ್ಕರ, ಜಿಲ್ಲಾ ಶಸ್ತೊ ಚಿಕಿತ್ಸಕ ಡಾ.ಗಣೇಶ, ಕಮ್ಯೂನಿಟಿ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ.ಹೇಮಗೀರಿ, ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ವಿಶ್ವನಾಥ ಮಾಚಕ್ಕನವರ, ಮಾನಸಿಕ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ.ವಿಜಯರಾಜ್, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ನಟರಾಜ, ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷ ವಿ.ಎಂ. ಹೆಗಡೆ, ರೋಟರಿ ಸಂಸ್ಥೆಯ ಅಧ್ಯಕ್ಷ ಡಾ.ಅರ್ಜುನ ಉಪಾಧ್ಯಾಯ ಮತ್ತಿತರರು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 