ಬೆಳಗಾವಿ

ಯಶಸ್ವಿಯಾಗಿ ಜರುಗಿದ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮ

ಯಶಸ್ವಿಯಾಗಿ ಜರುಗಿದ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮ

ಲೋಕದರ್ಶನ ವರದಿ 

ಯಮಕನಮರಡಿ 28 : ಸಮೀಪದ ಆನಂದಪುರ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆ ಅವರಣದಲ್ಲಿ ಇರುವ ಅಂಗನವಾಡಿ ಕೇಂದ್ರದಲ್ಲಿ ದಿನಾಂಕ 30 ರಂದು ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು ಹುಕ್ಕೇರಿ ತಾಲೂಕ ವೈದ್ಯಾಧಿಕಾರಿಗಳಾದ ಉದಯ ಕುಮಾರ್ ಕುಡಚಿ ಹಾಗೂ ಹತ್ತಿರಗಿ ಮಾಜಿ ಗ್ರಾಮ ಪಂ ಅಧ್ಯಕ್ಷ ಮಹಾದೇವ್ ಪಟೋಲಿ ಉಪಸ್ಥಿತರಿದ್ದು ಮಕ್ಕಳಿಗೆ ಪೋಲಿಯೋ ಹನಿಯನ್ನು ಹಾಕಿದರು ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯ ಕರ್ತೀಯರು ಹಾಗೂ ಆಶಾ ಕಾರ್ಯಕರ್ತೀಯರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದು ಕಾರ್ಯಕ್ರಮ ಉದ್ದೇಶಿಸಿ ಉದಯ ಕುಡಚಿ ಅವರು ಮಾತನಾಡುತ್ತಾ ತಾಲೂಕಿನಲ್ಲಿ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮವು ನೂರಕ್ಕೆ ನೂರರಷ್ಟು ಯಶಸ್ವಿಯಾಗಿ ಜರುಗುತ್ತಿದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಸ್ಥಳೀಯ ಪತ್ರಕರ್ತರ ಬಳಗದವರಾದ ಸಂಜು ಮುಷ್ಟಿಗಿ ಕಲ್ಲಪ್ಪ ಕಾಮ ನಾಯಕ್ ಪ್ರಭು ಕೋತ ಭೀಮಪ್ಪ ಕೋತೆಕ್ರ ಗೋಪಾಲ ಚಪನಿ ನ್ಯಾಯವಾದಿಗಳಾದ ದಡ್ಡಿ ಮುಂತಾದವರು ಉಪಸ್ಥಿತರಿದ್ದರು 


ಸುದ್ದಿ ಓದಿ