ಶಿವಾನಂದ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸದ್ಭಾವನಾ ದಿನಾಚರಣೆ
National Sadbhavana Diwas Celebration at Shivananda Mahavidyalaya
ಕಾಗವಾಡ 21: ಸದ್ಭಾವನೆಯು ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೇ ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಮೌಲ್ಯವಾಗಬೇಕು ಎಂದು ಪ್ರಾಚಾರ್ಯ ಡಾ. ಎಸ್.ಪಿ. ತಳವಾರ ತಿಳಿಸಿದ್ದಾರೆ.
ಅವರು ಗುರುವಾರ ದಿ. 20 ರಂದು ಪಟ್ಟಣದ ಶಿವಾನಂದ ಮಹಾವಿದ್ಯಾಲಯದ ಐಕ್ಯೂಎಸಿ ಪ್ರಯೋಜಿಕತ್ವದಲ್ಲಿ ಎನ್‌ಎಸ್‌ಎಸ್, ಎನ್‌ಸಿಸಿ, ವೈಆರ್‌ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಸಂಯುಕ್ತ ಸಹಯೋಗದಲ್ಲಿ ರಾಷ್ಟ್ರೀಯ ಸದ್ಭಾವನಾ ದಿನಾಚರಣೆಯ ಸಮಾರಂಭದ ಅಧ್ಯಕ್ಷತೆ ವಹಿಸಿ, ಮಾತನಾಡುತ್ತಿದ್ದರು.
ಸಮಾಜದಲ್ಲಿ ಶಾಂತಿ, ಏಕತೆ ಮತ್ತು ಸಹೋದರತ್ವವನ್ನು ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದ್ದು, ವಿಶೇಷವಾಗಿ ಯುವಜನರು ಜಾತಿ, ಧರ್ಮ, ಭಾಷೆ ಮತ್ತು ಇತರ ಭಿನ್ನತೆಗಳನ್ನು ಮೀರಿ ಪರಸ್ಪರ ಗೌರವ, ಪ್ರೀತಿ ಹಾಗೂ ಸಹಕಾರದಿಂದ ಬದುಕಬೇಕು. ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳು ಸದ್ಭಾವನೆ ಮತ್ತು ರಾಷ್ಟ್ರೀಯ ಏಕತೆಯ ಸಂದೇಶವನ್ನು ಸಮಾಜದಲ್ಲಿ ಹರಡಬೇಕು ಎಂದು ಕರೆ ನೀಡಿದರು.
ಈ ವೇಳೆ ಎನ್‌ಎಸ್‌ಎಸ್ ಘಟಕದ ಅಧಿಕಾರಿ ಡಾ. ಚಂದ್ರಶೇಖರ ವೈ., ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ. ಜೆ.ಕೆ. ಪಾಟೀಲ ಸ್ಕೌಟ್ಸ್ ಮತ್ತು ಗೈಡ್ಸ್ ಅಧಿಕಾರಿ ಪ್ರೊ. ಆರ್.ಎಸ್. ನಾಗರಡ್ಡಿ, ವೈಆರ್‌ಸಿ ಅಧಿಕಾರಿ ಎಸ್.ಎಸ್. ಫಡತರೆ ಸೇರಿದಂತೆ ಎನ್‌ಎಸ್‌ಎಸ್, ಎನ್‌ಸಿಸಿ, ವೈಆರ್‌ಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಅಧಿಕಾರಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 