ಪಾಲಿಟೆಕ್ನಿಕ್ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ
National Service Scheme Day Celebration at the Polytechnic
ಬಳ್ಳಾರಿ, ಸೆ.25: ವೀರಶೈವ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಹಾನಗಲ್ ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೆ.24ರಂದು ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಎನ್‌ಎಸ್‌ಎಸ್ ಅಧಿಕಾರಿ ರಾಜೇಶ್ ಕುಮಾರ್ ಜಿ.ಎಂ. ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ರಾಷ್ಟ್ರೀಯ ಸೇವಾ ಯೋಜನೆಯನ್ನು ಮಹಾತ್ಮ ಗಾಂಧೀಜಿಯವರ ಜನ್ಮಶತಮಾನೋತ್ಸವದ ಸ್ಮರಣಾರ್ಥವಾಗಿ ಆರಂಭಿಸಲಾಯಿತು ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಬಿ. ಶ್ರೀಶೈಲಗೌಡ, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಆಯೋಜನೆ ಮತ್ತು ನಿರೂಪಣೆಯನ್ನು ಎನ್‌ಎಸ್‌ಎಸ್ ಅಧಿಕಾರಿ ರಾಜೇಶ್ ಕುಮಾರ್ ಜಿ.ಎಂ. ಹಾಗೂ ಸಮನ್ವಯ ಅಧಿಕಾರಿ ಕೆ. ಪಂಪನಗೌಡ ನೆರವೇರಿಸಿದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 